ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಸಿಎಸ್: 45 ಸಾವಿರ ಹೊಸ ನೇಮಕಾತಿ

Last Updated 20 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಪ್ರಸಕ್ತ ಹಣಕಾಸು ವರ್ಷದಲ್ಲಿ ನೌಕರರ ವೇತನವನ್ನು ಸರಾಸರಿ ಶೇ 7ರಷ್ಟು ಹೆಚ್ಚಿಸಲಾಗುವುದು ಹಾಗೂ 45 ಸಾವಿರ ಜನರನ್ನು ಹೊಸದಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಐ.ಟಿ ಸೇವಾ ಸಂಸ್ಥೆ ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ (ಟಿಸಿಎಸ್) ಹೇಳಿದೆ.

ಏಪ್ರಿಲ್ ಮೊದಲ ವಾರದಿಂದ ವೇತನ ಪರಿಷ್ಕರಣೆ ಆರಂಭವಾಗಿದೆ. ಸಿಬ್ಬಂದಿ ಸಾಧನೆ ಆಧರಿಸಿ ವೇತನದಲ್ಲಿ ಶೇ 5ರಿಂದ ಶೇ 10ರಷ್ಟು ಏರಿಕೆ ಮಾಡುವ ಯೋಜನೆ ಇದೆ.  ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ  ಶೇ 4ರಿಂದ 6ರಷ್ಟು ಸರಾಸರಿ  ವೇತನ ಹೆಚ್ಚಳ ಮಾಡಲಾಗುವುದು ಎಂದು `ಟಿಸಿಎಸ್'ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಜಯ್ ಮುಖರ್ಜಿ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT