ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಸಿಎಸ್ ಮಾರುಕಟ್ಟೆ ಮೌಲ್ಯ ರೂ 4 ಲಕ್ಷ ಕೋಟಿ

Last Updated 2 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ):  ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ (ಟಿಸಿಎಸ್) ಮಾರುಕಟ್ಟೆ ಮೌಲ್ಯ ಸೋಮವಾರ ಮುಂಬೈ ಷೇರುಪೇಟೆಯಲ್ಲಿ ರೂ4 ಲಕ್ಷ ಕೋಟಿ ಗಡಿ ದಾಟಿದೆ. ರಿಲಯನ್ಸ್ ಇಂಡಸ್ಟ್ರೀಸ್ (ಆರ್‌ಐಎಲ್) ನಂತರ  ಮಾರುಕಟ್ಟೆ ಮೌಲ್ಯದಲ್ಲಿ ಈ ಮೈಲಿಗಲ್ಲು ದಾಟಿದ ಎರಡನೆಯ ಕಂಪೆನಿ ಎಂಬ ಹೆಗ್ಗಳಿಕೆಗೂ `ಟಿಸಿಎಸ್' ಪಾತ್ರವಾಗಿದೆ.

  ಕಂಪೆನಿಯ ಮಾರುಕಟ್ಟೆ ಮೌಲ್ಯ ಸೋಮವಾರ ವಹಿವಾಟಿನ ಅಂತ್ಯಕ್ಕೆ  ರೂ4,00,868  ಕೋಟಿಗೆ ಏರಿಕೆ ಕಂಡಿದೆ.  2004ರಲ್ಲಿ ಕಂಪೆನಿ ಮುಂಬೈ ಷೇರು ಪೇಟೆಯಲ್ಲಿ  ವಹಿವಾಟಿಗೆ ನೋಂದಾಯಿಸಿಕೊಂಡಿತ್ತು. ನಂತರ ಇದೇ ಮೊದಲ ಬಾರಿಗೆ ಈ ಸಾಧನೆ ಮಾಡಿದೆ.

ಮುಕೇಶ್ ಅಂಬಾನಿ ಒಡೆತನದ `ಆರ್‌ಐಎಲ್' 2007ರ ಅಕ್ಟೋಬರ್‌ನಲ್ಲಿ ಮಾರುಕಟ್ಟೆ ಮೌಲ್ಯದಲ್ಲಿ ರೂ4 ಲಕ್ಷ ಕೋಟಿ ಗಡಿ ದಾಟಿತ್ತು. ಆದರೆ, ಇತ್ತೀಚೆಗೆ `ಆರ್‌ಐಎಲ್'ನ ಷೇರು ಮೌಲ್ಯ ತೀವ್ರವಾಗಿ ಕುಸಿದಿದ್ದು ಮಾರುಕಟ್ಟೆ ಮೌಲ್ಯ ರೂ2.85 ಲಕ್ಷ ಕೋಟಿಗೆ ಇಳಿಕೆ ಕಂಡಿದೆ.  ಸದ್ಯ `ಟಿಸಿಎಸ್' ಮಾರುಕಟ್ಟೆ ಮೌಲ್ಯ `ಆರ್‌ಐಎಲ್'ಗಿಂತಲೂ ರೂ1 ಲಕ್ಷ ಕೋಟಿಗಿಂತಲೂ  ಹೆಚ್ಚಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT