ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆನಿಸ್: ಇಂದಿನಿಂದ ಆಸ್ಟ್ರೇಲಿಯನ್ ಓಪನ್ ಟೂರ್ನಿ

Last Updated 15 ಜನವರಿ 2012, 19:30 IST
ಅಕ್ಷರ ಗಾತ್ರ

ಮೆಲ್ಬರ್ನ್ (ಪಿಟಿಐ/ ಐಎಎನ್‌ಎಸ್): ಋತುವಿನ ಮೊದಲ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿ ಎನಿಸಿರುವ ಆಸ್ಟ್ರೇಲಿಯನ್ ಓಪನ್‌ಗೆ ಸೋಮವಾರ ಚಾಲನೆ ಲಭಿಸಲಿದೆ. ಇನ್ನು ಎರಡು ವಾರಗಳ ಕಾಲ ಮೆಲ್ಬರ್ನ್ ಪಾರ್ಕ್‌ನ ಕೋರ್ಟ್‌ಗಳಲ್ಲಿ ಟೆನಿಸ್ ಆಟದ ಸೌಂದರ್ಯ ಅನಾವರಣಗೊಳ್ಳಲಿದೆ.

ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಸರ್ಬಿಯದ ನೊವಾಕ್ ಜೊಕೊವಿಕ್‌ಗೆ ಅಗ್ರಶ್ರೇಯಾಂಕ ಲಭಿಸಿದ್ದು, ಪ್ರಶಸ್ತಿ ಗೆಲ್ಲುವ ನೆಚ್ಚಿನ ಆಟಗಾರ ಎನಿಸಿದ್ದಾರೆ. ವಿಶ್ವ ರ‌್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿರುವ ಜೊಕೊವಿಕ್ ಕಳೆದ ವರ್ಷ ಅದ್ಭುತ ಪ್ರದರ್ಶನ ನೀಡಿದ್ದರು. ಅದನ್ನು ಮುಂದುವರಿಸುವ ವಿಶ್ವಾಸದಲ್ಲಿದ್ದಾರೆ.

ಜೊಕೊವಿಚ್ ಅವರು ಸ್ಪೇನ್‌ನ ರಫೆಲ್ ನಡಾಲ್ ಮತ್ತು 16 ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ವಿಜೇತ ಸ್ವಿಟ್ಜರ್‌ಲೆಂಡ್‌ನ ರೋಜರ್ ಫೆಡರರ್ ಅವರಿಂದ ಪ್ರಬಲ ಪೈಪೋಟಿ ಎದುರಿಸಬೇಕಿದೆ. ಇವರಿಬ್ಬರು ಕ್ರಮವಾಗಿ ಎರಡು ಮತ್ತು ಮೂರನೇ ಶ್ರೇಯಾಂಕ ಪಡೆದಿದ್ದಾರೆ.

ಇವರ ಜೊತೆಗೆ ಬ್ರಿಟನ್‌ನ ಆ್ಯಂಡಿ ಮರ‌್ರೆ, ಫ್ರಾನ್ಸ್‌ನ ಜೋ ವಿಲ್ಫ್ರೆಡ್ ಸೋಂಗಾ ಮತ್ತು ಗೈಲ್ ಮೊಂಫಿಲ್ಸ್, ಅರ್ಜೆಂಟೀನಾದ ಜುವಾನ್ ಡೆಲ್ ಪೊಟ್ರೊ ಹಾಗೂ ಸ್ಪೇನ್‌ನ ಡೇವಿಡ್ ಫೆರರ್ ಅಚ್ಚರಿಯ ಫಲಿತಾಂಶ ನೀಡುವ ಸಾಮರ್ಥ್ಯ ಹೊಂದಿದ್ದಾರೆ.

ಮಹಿಳೆಯರ ವಿಭಾಗದಲ್ಲಿ ಡೆನ್ಮಾಕ್‌ನ ಕ್ಯಾರೊಲಿನ್ ವೊಜ್‌ನಿಯಾಕಿ ಅಗ್ರಶ್ರೇಯಾಂಕ ಪಡೆದಿದ್ದು, ಪ್ರಶಸ್ತಿ ಗೆಲ್ಲುವ ನೆಚ್ಚಿನ ಆಟಗಾರ್ತಿ ಎನಿಸಿದ್ದಾರೆ. ಹಳೆಯ ಲಯ ಕಂಡುಕೊಳ್ಳುವ ಪ್ರಯತ್ನದಲ್ಲಿರುವ ಅಮೆರಿಕದ ಸೆರೆನಾ ವಿಲಿಯಮ್ಸ, ರಷ್ಯಾದ ಮರಿಯಾ ಶರ್ಪೋವಾ ಮತ್ತು ಬೆಲ್ಜಿಯಂನ ಕಿಮ್ ಕ್ಲೈಸ್ಟರ್ಸ್ ಅವರನ್ನು ಕಡೆಗಣಿಸುವಂತಿಲ್ಲ.
ಭಾರತದ ಭರವಸೆ ಡಬಲ್ಸ್‌ನಲ್ಲಿ: ಈ ಟೂರ್ನಿಯಲ್ಲಿ ಭಾರತದ ಭರವಸೆ ಪುರುಷರ ಡಬಲ್ಸ್ ವಿಭಾಗಕ್ಕೆ ಮಾತ್ರ ಸೀಮಿತಗೊಂಡಿದೆ. ಮಹೇಶ್ ಭೂಪತಿ ಅವರು ರೋಹನ್ ಬೋಪಣ್ಣ ಜೊತೆ ಕಣಕ್ಕಿಳಿಯಲಿದ್ದಾರೆ. ಇನ್ನೊಬ್ಬ ಅನುಭವಿ ಆಟಗಾರ ಲಿಯಾಂಡರ್ ಪೇಸ್ ಜೆಕ್ ಗಣರಾಜ್ಯದ ರಾಡೆಕ್ ಸ್ಟೆಪಾನೆಕ್ ಅವರೊಂದಿಗೆ ಆಡುವರು.
ಮಿಶ್ರ ಡಬಲ್ಸ್‌ನಲ್ಲಿ ಭೂಪತಿ ಮತ್ತು ಸಾನಿಯಾ ಮಿರ್ಜಾ ಜೊತೆಯಾಗಿ ಆಡುವರು. ಸಿಂಗಲ್ಸ್‌ನಲ್ಲಿ ಕಣದಲ್ಲಿರುವ ಭಾರತದ ಏಕೈಕ ಸ್ಪರ್ಧಿ ಸಾನಿಯಾ. ಮೊದಲ ಸುತ್ತಿನ ಪಂದ್ಯದಲ್ಲಿ ಅವರು ಬಲ್ಗೇರಿಯದ ಸ್ವೆಟಾನಾ ಪಿರೊಂಕೋವಾ ವಿರುದ್ಧ ಪೈಪೋಟಿ ನಡೆಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT