ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆನಿಸ್: ನಿಕ್ಷೇಪ್‌ಗೆ ಪ್ರಶಸ್ತಿ ಡಬಲ್

Last Updated 27 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬಿ.ಆರ್. ನಿಕ್ಷೇಪ್ ಇಲ್ಲಿ ನಡೆದ 14 ವರ್ಷ ವಯಸ್ಸಿನೊಳಗಿನವರ ಏಷ್ಯನ್ ಜೂನಿಯರ್ ಟೆನಿಸ್ ಟೂರ್ನಿಯ ಬಾಲಕರ ಸಿಂಗಲ್ಸ್ ಮತ್ತು ಡಬಲ್ಸ್ ವಿಭಾಗದಲ್ಲಿ ಚಾಂಪಿಯನ್ ಆಗಿ ಪ್ರಶಸ್ತಿ `ಡಬಲ್~ ಗೌರವ ಪಡೆದುಕೊಂಡರು.

ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ಕೋರ್ಟ್‌ನಲ್ಲಿ ಶುಕ್ರವಾರ ನಡೆದ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಅಗ್ರ ಶ್ರೇಯಾಂಕದ ನಿಕ್ಷೇಪ್ 6-4, 6-2 ರಲ್ಲಿ ನಾಲ್ಕನೇ ಶ್ರೇಯಾಂಕದ ವಿಜಯ್ ಮೊಹಂತಿ ಅವರನ್ನು ಮಣಿಸಿದರು.

ಡಬಲ್ಸ್ ವಿಭಾಗದ ಫೈನಲ್‌ನಲ್ಲಿ ನಿಕ್ಷೇಪ್- ಅಲೆಕ್ಸ್ ಸೋಲಂಕಿ ಜೋಡಿ 7-6, 3-6, 10-5 ಸನಿಲ್ ಜಗತಿಯಾನಿ- ಪರೀಕ್ಷಿತ್ ಸೊಮಾನಿ ವಿರುದ್ಧ ಜಯ ಪಡೆಯಿತು.

ಬಾಲಕಿಯರ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಕರ್ಮಾನ್ ಕೌರ್ 6-4, 7-6 ರಲ್ಲಿ ಆರ್. ಅಭಿನಿಕಾ ಎದುರು ಗೆದ್ದು ಪ್ರಶಸ್ತಿ ತಮ್ಮದಾಗಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT