ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆನಿಸ್: ಫೈನಲ್‌ಗೆ ಭೂಪತಿ-ಬೋಪಣ್ಣ

Last Updated 19 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ಸಿನ್ಸಿನಾಟಿ, ಅಮೆರಿಕ (ಪಿಟಿಐ): ಮಹೇಶ್ ಭೂಪತಿ ಹಾಗೂ ರೋಹನ್ ಬೋಪಣ್ಣ ಇಲ್ಲಿ ನಡೆಯುತ್ತಿರುವ ಸಿನ್ಸಿನಾಟಿ ಮಾಸ್ಟರ್ಸ್ ಟೆನಿಸ್ ಟೂರ್ನಿಯ ಡಬಲ್ಸ್‌ನಲ್ಲಿ ಫೈನಲ್ ಪ್ರವೇಶಿಸಿದ್ದಾರೆ.

ಸೆಮಿಫೈನಲ್‌ನಲ್ಲಿ ಭೂಪತಿ ಹಾಗೂ ರೋಹನ್ 6-4, 6-3ರಲ್ಲಿ ಕ್ರೊವೇಷ್ಯಾದ ಇವಾನ್ ಡೊಡಿಗ್ ಹಾಗೂ ಬ್ರೆಜಿಲ್‌ನ ಮಾರ್ಸೆಲ್ ಎದುರು ಜಯ ಗಳಿಸಿದರು.

ಕಳೆದ ಬಾರಿ ಈ ಟೂರ್ನಿಯಲ್ಲಿ ಲಿಯಾಂಡರ್ ಪೇಸ್ ಜೊತೆಗೂಡಿ ಆಡಿದ್ದ ಮಹೇಶ್ ಚಾಂಪಿಯನ್ ಆಗಿದ್ದರು. ಆ ಸಾಧನೆಯನ್ನು ಪುನರಾವರ್ತಿಸುವ ಅವಕಾಶ ಈಗ ಭಾರತದ ಈ ಆಟಗಾರನಿಗೆ ಇದೆ. ಭಾರತದ ಈ ಜೋಡಿ ಫೈನಲ್‌ನಲ್ಲಿ ಸ್ವೀಡನ್‌ನ ರಾಬೆರ್ಟ್ ಲಿಂಡ್‌ಸ್ಟೆಡ್ ಹಾಗೂ ರುಮೇನಿಯಾದ ಹೊರಿಯಾ ಟೇಕು ಅವರನ್ನು ಎದುರಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT