ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆನಿಸ್: ಸೆಮಿಫೈನಲ್‌ಗೆ ಬೋಪಣ್ಣ-ಖುರೇಶಿ

Last Updated 8 ಜೂನ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತದ ರೋಹನ್ ಬೋಪಣ್ಣ ಹಾಗೂ ಪಾಕಿಸ್ತಾನದ ಐಸಾಮ್ ಉಲ್ ಹಕ್ ಖುರೇಶಿ ಅವರು ಜರ್ಮನಿಯ ಹಾಲೆಯಲ್ಲಿ ನಡೆಯುತ್ತಿರುವ ಜೆರ‌್ರಿ ವೆಬರ್ ಓಪನ್ ಟೆನಿಸ್ ಟೂರ್ನಿಯ ಡಬಲ್ಸ್ ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.

ಬುಧವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬೋಪಣ್ಣ ಹಾಗೂ ಖುರೇಶಿ 4-6, 7-6, 10-4ರಲ್ಲಿ ಜರ್ಮನಿಯ ಡಸ್ಟಿನ್ ಬ್ರೌನ್ ಹಾಗೂ ಫ್ರಾನ್ಸ್‌ನ ಗೇಲ್ ಮೊನ್‌ಫಿಲ್ಸ್ ಅವರನ್ನು ಪರಾಭವಗೊಳಿಸಿದರು.

`ಇಂಡೋ-ಪಾಕ್ ಎಕ್ಸ್‌ಪ್ರೆಸ್~ ಖ್ಯಾತಿಯ ಜೋಡಿ ಮೊದಲ ಸೆಟ್‌ನಲ್ಲಿ ಸೋಲು ಕಂಡಿತು. ಶ್ರೇಯಾಂಕ ರಹಿತ ಜೋಡಿಯಾದ ಬ್ರೌನ್ ಹಾಗೂ ಮೊನ್‌ಫಿಲ್ಸ್ ಅಚ್ಚರಿ ಪ್ರದರ್ಶನ ತೋರಿತು. ಆದರೆ ಬೋಪಣ್ಣ-ಖುರೇಶಿ ಸಾಕಷ್ಟು ಹೋರಾಟಕ್ಕೆ ಕಾರಣವಾದ ಎರಡನೇ ಸೆಟ್‌ನಲ್ಲಿ ಗೆದ್ದು ಪಂದ್ಯವನ್ನು ಸಮಬಲ ಮಾಡಿಕೊಂಡರು. ನಿರ್ಣಾಯಕ ಸೆಟ್‌ನಲ್ಲಿ ಅಷ್ಟೊಂದು ಸಮಸ್ಯೆ ಎದುರಾಗಲಿಲ್ಲ.

ಸೂಪರ್ ಟೈಬ್ರೇಕರ್‌ನಲ್ಲಿ ಬೋಪಣ್ಣ ಹಾಗೂ ಖುರೇಷಿ 10-4ರಲ್ಲಿ ಗೆದ್ದು ನಾಲ್ಕರ ಘಟ್ಟದಲ್ಲಿ ಆಡಲು ಅವಕಾಶ ಪಡೆದುಕೊಂಡರು.

ಭಾರತ-ಪಾಕ್ ಜೋಡಿ ಟೂರ್ನಿಯಲ್ಲಿ ಅಗ್ರ ಶ್ರೇಯಾಂಕ ಪಡೆದುಕೊಂಡಿದೆ. ಸೆಮಿಫೈನಲ್‌ನಲ್ಲಿ ಬೋಪಣ್ಣ ಹಾಗೂ ಖುರೇಶಿ ಜರ್ಮನಿಯ ಕ್ರಿಸ್ಟೋಫರ್ ಕಾಸ್-ಫಿಲಿಪ್ ಕೊಹ್ಲಶ್ರೆಬರ್ ಹಾಗೂ ಫಿನ್ಲೆಂಡ್‌ನ ಜರ್ಕೊ ನಿಮಿನೆನ್-ಸರ್ಬಿಯಾದ ವಿಕ್ಟರ್ ಟ್ರಾಯಿಕಿ ನಡುವಿನ ಪಂದ್ಯದ ವಿಜೇತರನ್ನು ಎದುರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT