ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಸ್ಟ್‌ಗೆ ನಿವೃತ್ತಿ: ದೋನಿ ಚಿಂತನೆ

Last Updated 12 ಜನವರಿ 2012, 19:30 IST
ಅಕ್ಷರ ಗಾತ್ರ

ಪರ್ತ್ (ಪಿಟಿಐ): ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ದೋನಿ ಮುಂದಿನ ವರ್ಷ ಟೆಸ್ಟ್ ಕ್ರಿಕೆಟ್‌ನಿಂದ ದೂರವಾಗುವ ಸಾಧ್ಯತೆಯಿದೆ. ಸ್ವತಃ `ಮಹಿ~ ಈ ವಿಷಯ ಬಹಿರಂಗಪಡಿಸಿದ್ದಾರೆ.

`2015ರ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕೆಂಬುದು ನನ್ನ ಬಯಕೆ. ಅದು ಈಡೇರಬೇಕಾದರೆ ಐದು ದಿನಗಳ ಪಂದ್ಯದಿಂದ ಬೇಗನೇ ನಿವೃತ್ತಿ ಹೊಂದುವುದು ಅಗತ್ಯ~ ಎಂದು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

`2013 ರ ಕೊನೆಯ ವೇಳೆಗೆ ನನ್ನ ದೈಹಿಕ ಸಾಮರ್ಥ್ಯ ಹೇಗಿರುತ್ತದೆ ಎಂಬುದು ಮುಖ್ಯ. ಅದರ ಆಧಾರದಲ್ಲಿ ಮುಂದಿನ ನಿರ್ಧಾರ ಕೈಗೊಳ್ಳುವೆ. ಟೆಸ್ಟ್ ಪಂದ್ಯಗಳನ್ನು ಆಡುವ ಜೊತೆಗೆ 2015ರ ವಿಶ್ವಕಪ್‌ನಲ್ಲೂ ಪಾಲ್ಗೊಳ್ಳಲು ಸಾಧ್ಯವೇ ಎಂಬುದನ್ನು ನೋಡಬೇಕು. ಅದು ಕಷ್ಟವೆನಿಸಿದರೆ ಒಂದು ಪ್ರಕಾರದ (ಟೆಸ್ಟ್) ಕ್ರಿಕೆಟ್‌ನಿಂದ ದೂರವಾಗಬೇಕು~ ಎಂದರು.

30ರ ಹರೆಯದ ದೋನಿ ಇದುವರೆಗೆ 66 ಟೆಸ್ಟ್‌ಗಳನ್ನು ಆಡಿದ್ದಾರೆ. ಇದರಲ್ಲಿ 36 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದು, 17ರಲ್ಲಿ ಗೆಲುವು ತಂದುಕೊಟ್ಟಿದ್ದಾರೆ. ದೋನಿ ಕೈಗೊಂಡಿರುವ ನಿರ್ಧಾರ ಕ್ರಿಕೆಟ್ ಪ್ರೇಮಿಗಳ ಅಚ್ಚರಿಗೆ ಕಾರಣವಾಗಿದೆ.

ಮುಂದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕೆ ಎಂಬುದನ್ನು 2013ರಲ್ಲಿ ನಿರ್ಧರಿಸುವುದಾಗಿ ದೋನಿ ಈ ಹಿಂದೆ ಹೇಳಿದ್ದರು. ವಿಶ್ವಕಪ್ ಟೂರ್ನಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನ ಜಂಟಿ ಆತಿಥ್ಯದಲ್ಲಿ ನಡೆಯಲಿದೆ.
 `ಫಾರ್ಮ್ ಎಂಬುದು ಮುಖ್ಯ. ಅದರ ಜೊತೆ ಬಹಳ ಮುಂಚಿತವಾಗಿ ನಿರ್ಧಾರ ಕೈಗೊಳ್ಳುವುದು ಅಗತ್ಯ.

ವಿಶ್ವಕಪ್‌ನಲ್ಲಿ ಆಡುವುದಿಲ್ಲ ಎಂಬ ತೀರ್ಮಾನವನ್ನು ನಾನು 2014 ರಲ್ಲಿ ಇದ್ದಕ್ಕಿದ್ದಂತೆ ಪ್ರಕಟಿಸುವುದು ಒಳ್ಳೆಯದಲ್ಲ. ಆ ಬಳಿಕ ತಂಡಕ್ಕೆ ಆಗಮಿಸುವ ವಿಕೆಟ್‌ಕೀಪರ್ ಕೇವಲ 30 ರಷ್ಟು ಏಕದಿನ ಪಂದ್ಯಗಳನ್ನಾಡಿ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಇದು ಸರಿಯಲ್ಲ~ ಎಂದು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT