ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರಾನ್ಸ್‌ಫಾರ್ಮರ್ ಸ್ಥಳಾಂತರಿಸಲಿ

Last Updated 9 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು ನಗರ ಮಾಗಡಿ ಮುಖ್ಯ ರಸ್ತೆ ಪ್ರಸನ್ನ ಚಿತ್ರಮಂದಿರ ಮತ್ತು ಮಾಗಡಿ ರಸ್ತೆಯ ಪೊಲೀಸ್ ಠಾಣೆ ಮುಂಭಾಗದ ಪಾದಚಾರಿ ಮಾರ್ಗದಲ್ಲಿ ಬೆಸ್ಕಾಂನ ದೊಡ್ಡದಾದ ಟ್ರಾನ್ಸ್‌ಫಾರ್ಮರ್ ಬಾಕ್ಸ್ ಇಟ್ಟಿದ್ದು, ಇದರಿಂದಾಗಿ ಪಾದಚಾರಿಗಳು ಫುಟ್‌ಪಾತ್ ಬದಲಾಗಿ ರಸ್ತೆಯಲ್ಲೇ ನಡೆದಾಡಬೇಕಾಗಿದೆ.

ಈ ರಸ್ತೆ ಪ್ರಮುಖ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ಮಾರ್ಗವಾಗಿದ್ದು, ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಒಂದೆಡೆ ಕಿರಿದಾದ ರಸ್ತೆಯಾದರೆ ಮತ್ತೊಂದೆಡೆ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಇದರಿಂದಾಗಿ ಪಾದಚಾರಿಗಳು ವಾಹನ ಚಾಲಕರೊಂದಿಗೆ ಸಂಘರ್ಷ ಉಂಟಾಗುತ್ತದೆ ಮತ್ತು ಸಣ್ಣ ಪುಟ್ಟ ಅಪಘಾತಗಳು ಸಂಭವಿಸುತ್ತಿರುತ್ತವೆ.

ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಈ ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ ಆವರಿಸಿಕೊಂಡಿರುವ ಟ್ರಾನ್ಸ್‌ಫಾರ್ಮರ್‌ನ್ನು ಸ್ಥಳಾಂತರಿಸಲಿ ಎಂದು ಮನವಿ ಮಾಡಿಕೊಳ್ಳುತ್ತೇನೆ.
-

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT