ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರೈವ್ಯಾಲಿ: ನೆರವಿಗೆ ಆಗ್ರಹ

Last Updated 15 ಫೆಬ್ರುವರಿ 2011, 16:45 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): ಟ್ರೈವ್ಯಾಲಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತೀಯ ಮೂಲದ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಲು ಅಮೆರಿಕ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಭಾರತ ಆಗ್ರಹಪಡಿಸಿದೆ.

ವೀಸಾ ಅಕ್ರಮದ ಹಿನ್ನೆಲೆಯಲ್ಲಿ ಕ್ಯಾಲಿಫೋರ್ನಿಯಾ ಮೂಲದ ಟ್ರೈವ್ಯಾಲಿ ವಿಶ್ವವಿದ್ಯಾಲಯವನ್ನು ಮುಚ್ಚಿದ್ದರಿಂದ ನೂರಾರು ಭಾರತೀಯ ವಿದ್ಯಾರ್ಥಿಗಳು ವ್ಯಾಸಂಗ ಮುಂದುವರಿಸಲಾಗದೆ ಅತಂತ್ರರಾಗಿದ್ದಾರೆ. ಸೋಮವಾರವಷ್ಟೇ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಜೊತೆ ದೂರವಾಣಿಯಲ್ಲಿ ಈ ಕುರಿತು ಸಂಭಾಷಣೆ ನಡೆಸಿದ್ದರು. ಅಮೆರಿಕದಲ್ಲಿರುವ ಭಾರತದ ರಾಯಭಾರಿ ಮೀರಾ ಶಂಕರ್ ಅವರು ಮಂಗಳವಾರ ಕ್ಲಿಂಟನ್ ಅವರನ್ನು ಭೇಟಿ ಮಾಡಿ ವಿದ್ಯಾರ್ಥಿಗಳ ವಿವರ ಒದಗಿಸಿ ಮನವರಿಕೆ ಮಾಡಿದ್ದಾರೆ ಎಂದು ಭಾರತೀಯ ರಾಜತಾಂತ್ರಿಕ ಕಚೇರಿ ವಕ್ತಾರ ವೀರೇಂದ್ರ ಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೀರಾ ಶಂಕರ್ ಮತ್ತು ಭಾರತದ ವಿದೇಶಾಂಗ ಕಾರ್ಯದರ್ಶಿ ನಿರುಪಮಾ ರಾವ್ ಅವರು ಮಂಗಳವಾರ ಸಂಜೆ ಹಿಲರಿ ಕ್ಲಿಂಟನ್ ಅವರನ್ನು ಭೇಟಿ ಮಾಡಿ ಈ ಕುರಿತು ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT