ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಠಾಣೆ ಮುಂದೆ ಮಧ್ಯರಾತ್ರಿ ಪ್ರತಿಭಟನೆ

Last Updated 7 ಏಪ್ರಿಲ್ 2013, 20:18 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಸೊಣ್ಣೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕರ್‌ನ್ನು ಚುನಾವಣಾ ಅಧಿಕಾರಿಗಳು ಭಾನುವಾರ ರಾತ್ರಿ 10 ಗಂಟೆ ಸಮಯದಲ್ಲಿ ವಶಪಡಿಸಿಕೊಂಡಿದ್ದಾರೆ.

ಪಕ್ಷೇತರ ಅಭ್ಯರ್ಥಿ ಬಿ.ಮುನೇಗೌಡ ಈ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದ್ದರು ಎಂದು ಹೇಳಲಾಗಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ಬಂದಿದೆ ಎಂಬ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ಟ್ಯಾಂಕ್‌ನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅಧಿಕಾರಿಗಳ ಈ ಕ್ರಮವನ್ನು ಖಂಡಿಸಿ ಸುಮಾರು 100 ಜನಕ್ಕೂ ಹೆಚ್ಚು ಸೊಣ್ಣೇನಹಳ್ಳಿ ಗ್ರಾಮಸ್ಥರು ದೊಡ್ಡಬೆಳವಂಗಲ ಪೊಲೀಸ್ ಠಾಣೆ ಮುಂದೆ ಮಧ್ಯರಾತ್ರಿ ಸುಮಾರು 12.30ರ ಸುಮಾರಿನಲ್ಲಿ ಪ್ರತಿಭಟನೆ ನಡೆಸಿದರು. ಬಿ.ಮುನೇಗೌಡ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT