ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಬ್ಬಾ ಅಂಗಡಿ ತೆರವು ವಿರೋಧಿಸಿ ಪ್ರತಿಭಟನೆ

Last Updated 14 ಡಿಸೆಂಬರ್ 2012, 10:01 IST
ಅಕ್ಷರ ಗಾತ್ರ

ಹುಬ್ಬಳ್ಳಿ: ರಸ್ತೆ ಪಕ್ಕದಲ್ಲಿರುವ ಡಬ್ಬಾ ಅಂಗಡಿಗಳನ್ನು ತೆರವು ಮಾಡದಂತೆ ಆಗ್ರಹಿಸಿ ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಸರ್ವಧರ್ಮ ಬೀದಿ ವ್ಯಾಪಾರಸ್ಥರ ಸಂಘದ ವತಿಯಿಂದ ಗುರುವಾರ ಪ್ರತಿಭಟನೆ ನಡೆಯಿತು.

`ಕಳೆದ 10-20 ವರ್ಷಗಳಿಂದ ಅವಳಿ ನಗರದ ರಸ್ತೆ ಪಕ್ಕದಲ್ಲಿ ನಿಗದಿ ಮಾಡಿದ ಬಾಡಿಗೆ ನೀಡಿ ಡಬ್ಬಾ ಅಂಗಡಿ ನಡೆಸಿಕೊಂಡು ಬಂದಿದ್ದೇವೆ. ಒಮ್ಮೆಗೆ ಈ ಅಂಗಡಿಗಳ ತೆರವು ಮಾಡಲು ಮುಂದಾಗಿರುವುದು ಸರಿಯಲ್ಲ. ಇದರಿಂದ ಜೀವನೋಪಾಯಕ್ಕೆ ತೊಂದರೆ ಆಗಲಿದೆ' ಎಂದು ಪ್ರತಿಭಟನಾಕಾರರು ತಿಳಿಸಿದರು.

ಡಬ್ಬಾ ಗಾಡಿಗಳನ್ನೂ ಜೊತೆಗೆ ಒಯ್ದು ರ‌್ಯಾಲಿ ನಡೆಸಿದ ಪ್ರತಿಭಟನಾ ಕಾರರು, `ಡಬ್ಬಾ ಅಂಗಡಿಗಳನ್ನು ತೆರವುಗೊಳಿಸುವು ದರಿಂದ ಈ ಅಂಗಡಿಗಳನ್ನೇ ನೆಚ್ಚಿಕೊಂಡು ಬಂದ ಸಾವಿರಾರು ಕುಟುಂಬಗಳು ಬೀದಿಪಾಲಾಗಲಿವೆ. ಇದರಿಂದ ಆತ್ಮಹತ್ಯೆ ಹಾದಿ ಹಿಡಿಯುವುದರಲ್ಲಿ ಸಂದೇಹವಿಲ್ಲ. ಹೀಗಾದರೆ ಈ ಸಾವಿಗೆ ನೀವೇ ಕಾರಣರಾಗುತ್ತೀರಿ'  ಎಂದರು

`ನಮಗೆ ಅನುಕೂಲ ಆಗುವಂತಹ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇತರೆ ಸಂಘ ಸಂಸ್ಥೆಗಳ ಜೊತೆ ಸೇರಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು' ಎಂದು ಎಚ್ಚರಿಕೆ ನೀಡಿದರು. ನಂತರ ಮೇಯರ್ ಡಾ. ಪಾಂಡುರಂಗ ಪಾಟೀಲ ಮತ್ತು ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT