ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ. ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿಗೆ ಕೃತಿ ಆಹ್ವಾನ

Last Updated 18 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಡಾ. ಬೆಸಗರಹಳ್ಳಿ ರಾಮಣ್ಣ ವಾರ್ಷಿಕ ಕಥಾ ಸಂಕಲನ ಪ್ರಶಸ್ತಿಗೆ 2011ರಲ್ಲಿ ಮೊದಲ ಮುದ್ರಣ ಕಂಡ ಕಥಾ ಸಂಕಲನಗಳನ್ನು ಆಹ್ವಾನಿಸಲಾಗಿದೆ.

ಪ್ರಕಾಶಕರು ಅಥವಾ ಲೇಖಕರು ಪ್ರಕಟಿತ ಕಥಾ ಸಂಕಲನದ ಮೂರು ಪ್ರತಿಗಳನ್ನು ಕಳುಹಿಸಬೇಕು. ಹಸ್ತಪ್ರತಿಗಳನ್ನು ಸ್ವೀಕರಿಸಲಾಗುವುದಿಲ್ಲ. ಓದುಗರೂ ಈ ಪ್ರಶಸ್ತಿಗೆ ಕೃತಿಗಳನ್ನು ಸೂಚಿಸಬಹುದು. 20 ಸಾವಿರ ರೂಪಾಯಿ ನಗದು ಮತ್ತು ಫಲಕವನ್ನು ಒಳಗೊಂಡಿರುವ ಪ್ರಶಸ್ತಿಯನ್ನು ಮೇ ಎರಡನೆಯ ವಾರದಲ್ಲಿ ಮಂಡ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು `ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ~ದ ಪ್ರಕಟಣೆ ತಿಳಿಸಿದೆ.

ಕೃತಿಗಳನ್ನು ಕಳುಹಿಸಬೇಕಾದ ವಿಳಾಸ: ಅಧ್ಯಕ್ಷರು, ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ, ನಂ. 90, 16ನೇ ಅಡ್ಡರಸ್ತೆ, ನಾಲ್ಕನೇ ಹಂತ, ಜೆ.ಪಿ. ನಗರ, ಬೆಂಗಳೂರು - 560 078. ಮೊಬೈಲ್: 94499 87678. ಕೃತಿಗಳನ್ನು ಮಾರ್ಚ್ 20ರೊಳಗೆ ಕಳುಹಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT