ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕ್ಕಿ: ಬೈಕ್ ಸವಾರ ಸಾವು

Last Updated 14 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವ್ನಪ್ಪಿದ ಘಟನೆ ರಾಜಾಜಿನಗರ ಸಮೀಪ ಮಂಗಳವಾರ ರಾತ್ರಿ ಸಂಭವಿಸಿದೆ.

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದವರಾದ ಸಂತೋಷ್ ಕುಮಾರ್(24) ಮೃತಪಟ್ಟವರು. ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು ರಾತ್ರಿ 8.30ರ ಸುಮಾರಿಗೆ ಪ್ರಕಾಶ್‌ನಗರದ ಮಾರ್ಗವಾಗಿ ಬೈಕ್‌ನಲ್ಲಿ ಹೋಗುತ್ತಿದ್ದರು. ರಾಜ್‌ಕುಮಾರ್ ರಸ್ತೆ ಬಳಿ ತಿರುವು ಪಡೆಯುವಾಗ ತುಮಕೂರು ಮಾರ್ಗದ ಕೆಎಸ್‌ಆರ್‌ಟಿಸಿ ಬಸ್ ಅವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆ ವಿಭಜಕದ ಮೇಲೆ ಬಿದ್ದ ಅವರ ತಲೆಗೆ ತೀವ್ರ ಪೆಟ್ಟಾಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಅವರು ಸಾವನ್ನಪ್ಪಿದರು ಎಂದು ಪೊಲೀಸರು ಮಾಹಿತಿ ನೀಡಿದರು.

ಅವರು ಹೆಲ್ಮೆಟ್ ಧರಿಸದಿರುವುದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದರು. ಎಚ್‌ಎಸ್‌ಆರ್ ಲೇಔಟ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT