ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿಸಿ ಸಭೆಗಳಿಗೆ ಪರಮೇಶ್ವರ್‌

Last Updated 16 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಜಿಲ್ಲಾ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಗಳಲ್ಲಿ ಖುದ್ದಾಗಿ ಭಾಗವಹಿಸಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ತೀರ್ಮಾನಿಸಿದ್ದಾರೆ.

ಆರಂಭದಲ್ಲಿ ನಾಲ್ಕು ಕಂದಾಯ ವಿಭಾಗಗಳ ತಲಾ ಒಂದು ಜಿಲ್ಲೆಯ ಕಾಂಗ್ರೆಸ್‌ ಕಾರ್ಯಕಾರಿಣಿಯಲ್ಲಿ ಕೆಪಿಸಿಸಿ ಅಧ್ಯಕ್ಷರು ಭಾಗವಹಿಸುವರು. ಬೆಳಗಾವಿ­ಯಲ್ಲಿ ಸೆ.18ರಂದು ನಡೆ­ಯುವ ಕಾರ್ಯ­ಕಾರಿಣಿಯಲ್ಲಿ ಅವರು ಭಾಗ­ವಹಿ­ಸುವರು. ನಂತರ ಸೆ.23ರಂದು ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಕಾರ್ಯ­ಕಾರಿಣಿಯಲ್ಲಿ ಪಾಲ್ಗೊ­ಳ್ಳು­ವರರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರ ಸೂಚನೆಯಂತೆ ಪರ­ಮೇಶ್ವರ್‌ ಜಿಲ್ಲಾ ಸಮಿತಿಗಳ ಕಾರ್ಯ­ಕಾರಿಣಿಯಲ್ಲಿ ಪಾಲ್ಗೊಳ್ಳಲು ಮುಂದಾ­ಗಿದ್ದಾರೆ. ಎಲ್ಲಾ ಜಿಲ್ಲಾ ಕಾಂಗ್ರೆಸ್‌ ಸಮತಿ­ಯ ಪದಾಧಿ­ಕಾರಿಗಳನ್ನು ಭೇಟಿಮಾಡಿ ಪಕ್ಷ ಸಂಘ­ಟನೆಗೆ ಉತ್ತೇಜಿಸಲು ಈ ಅವಕಾಶವನ್ನು ಬಳಸಿಕೊಳ್ಳಲು ಯೋಚಿ­ಸಿ­ದ್ದಾರೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT