ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಡ ತೊರೆಯಲು ಗೇಲ್ ಚಿಂತೆ

Last Updated 17 ಜೂನ್ 2011, 19:30 IST
ಅಕ್ಷರ ಗಾತ್ರ

ಕಿಂಗ್‌ಸ್ಟನ್ (ಪಿಟಿಐ): ವೆಸ್ಟ್‌ಇಂಡೀಸ್ ಕ್ರಿಕೆಟ್ ಮಂಡಳಿ (ಡಬ್ಲ್ಯುಐಸಿಬಿ) ತಮ್ಮನ್ನು ನಡೆಸಿಕೊಳ್ಳುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ನಾಯಕ ಕ್ರಿಸ್ ಗೇಲ್ ಅವರು ದೇಶದ ತಂಡ ತೊರೆಯಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಈ ವಿಷಯವನ್ನು ಸ್ಥಳೀಯ ದಿನಪತ್ರಿಕೆ `ಟ್ರಿನಿಡಾಡ್ ಗಾರ್ಡಿಯನ್~ ವರದಿ ಮಾಡಿದೆ. ಇತ್ತೀಚೆಗೆ ನಡೆದ ಮಂಡಳಿಯ ಸಭೆಯಲ್ಲಿ ಮತ್ತಷ್ಟು ಜಟಾಪಟಿ ನಡೆದಿದೆ ಎನ್ನಲಾಗಿದೆ.ಗಾಯಗೊಂಡಿದ್ದ ಸಮಯದಲ್ಲಿ ವಿಂಡೀಸ್ ಕ್ರಿಕೆಟ್ ಮಂಡಳಿ ತಮ್ಮನ್ನು ಅನಾಥರನ್ನಾಗಿ ಮಾಡಿತು ಎಂದು ಗೇಲ್ ರೇಡಿಯೊ ಸಂದರ್ಶನದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹೇಳಿಕೆಯನ್ನು ಹಿಂಪಡೆಯುವಂತೆ ಕ್ರಿಕೆಟ್ ಮಂಡಳಿ ಸೂಚಿಸಿತ್ತು. ಆದರೆ ಗೇಲ್ ಅದಕ್ಕೆ ಒಪ್ಪಿರಲಿಲ್ಲ.  

`ವಿಂಡೀಸ್ ತಂಡವನ್ನು ಪ್ರತಿನಿಧಿಸಲು ಗೇಲ್ ತುಂಬಾ ಆಸಕ್ತಿ ಹೊಂದಿದ್ದಾರೆ. ಹಾಗಾಗಿಯೇ ಅವರು ಮಂಡಳಿ ಇತ್ತೀಚೆಗೆ ಕರೆದಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಸಭೆಯಲ್ಲಿ ನಡೆದ ಬೆಳವಣಿಗೆಗಳು ಅವರಲ್ಲಿ ಅಸಮಾಧಾನಕ್ಕೆ ಕಾರಣವಾಗಿವೆ. ಹಾಗಾಗಿ ರಾಷ್ಟ್ರೀಯ ತಂಡ ತೊರೆದು ಬೇರೆಡೆಗೆ ತೆರಳಲು ಅವರು ಯೋಚಿಸುತ್ತಿದ್ದಾರೆ~ ಎಂದು ಆ ಪತ್ರಿಕೆ ವರದಿ ಮಾಡಿದೆ. ಆದರೆ ಎಲ್ಲಿಗೆ ಹೋಗುತ್ತಾರೆ ಎನ್ನುವುದನ್ನು ಸ್ಪಷ್ಟಪಡಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT