ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಬಾಕು ಉತ್ಪನ್ನ ಮಾರಾಟ : ಎರಡು ದಿನದಲ್ಲಿ ಕಾಯ್ದೆ ಜಾರಿಗೆ

Last Updated 2 ಫೆಬ್ರುವರಿ 2011, 17:55 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಗುಟ್ಕಾ ಮತ್ತಿತರೆ ತಂಬಾಕು ಉತ್ಪನ್ನಗಳನ್ನು ಪ್ಲಾಸ್ಟಿಕ್ ಪ್ಯಾಕೇಟ್‌ಗಳಲ್ಲಿ ಮಾರಾಟ ಮಾಡುವುದನ್ನು ತಪ್ಪಿಸಲು ಎರಡು ದಿನಗಳ ಒಳಗಾಗಿ ಸೂಕ್ತ ಕಾನೂನು ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಬುಧವಾರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಈ ಸಂಬಂಧ ಕಾನೂನು ಜಾರಿಗೆ ಇನ್ನಷ್ಟು ಕಾಲಾವಕಾಶ ನೀಡಬೇಕೆಂಬ ಸರ್ಕಾರದ ಕೋರಿಕೆಯನ್ನು ತಿರಸ್ಕರಿಸಿದ ನ್ಯಾಯಾಲಯ, ಹೆಚ್ಚಿನ ಸಮಯ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಈ ಸಂಬಂಧ ನಿಮ್ಮ ಬಳಿ ಇರುವ ಕಾನೂನನ್ನು ಎರಡು ದಿನಗಳ ಒಳಗಾಗಿ ಸರ್ಕಾರ ಪ್ರಕಟಿಸಬೇಕು. ಇಲ್ಲವಾದಲ್ಲಿ ಕೋರ್ಟ್ ಆದೇಶ ಉಲ್ಲಂಘಿಸಿದ ಗಂಡಾಂತರವನ್ನು ನೀವೇ ಮೈಮೇಲೆ ಹಾಕಿಕೊಂಡಂತಾಗುತ್ತದೆ ಎಂದು ನ್ಯಾಯಮೂರ್ತಿ ಜಿ.ಎಸ್. ಸಿಂಘ್ವಿ ಎಚ್ಚರಿಸಿದರು.

ಫೆಬ್ರುವರಿ 4ರ ಒಳಗೆ ಈ ಕುರಿತ ಕಾನೂನು ಜಾರಿಗೊಳಿಸಬೇಕು ಎಂದು ನ್ಯಾಯಾಲಯ ಕಳೆದ ಡಿಸೆಂಬರ್‌ನಲ್ಲಿ ಸರ್ಕಾರಕ್ಕೆ ಸೂಚಿಸಿತ್ತು. ಇದೀಗ ಆ ಅವಧಿ ಮುಗಿಯುತ್ತ ಬಂದಿದೆ. ಈ ಸಂಬಂಧ 2009ರಲ್ಲಿ ನಿಯಾಮವಳಿ ರೂಪಿಸಲಾಗಿದೆ. ಕೇವಲ ಅಧಿಸೂಚನೆ ಹೊರಬೀಳಬೇಕಿದೆ ಎಂದು ಕೇಂದ್ರದ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT