ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಜ್ಞರ ಸಮಿತಿ ರಚನೆ: ಕಾಗೇರಿ

ಅರ್ಧಕ್ಕೇ ಶಾಲೆ ಬಿಡುವ ಮಕ್ಕಳು
Last Updated 10 ಡಿಸೆಂಬರ್ 2012, 21:01 IST
ಅಕ್ಷರ ಗಾತ್ರ

ಸುವರ್ಣ ವಿಧಾನಸೌಧ (ಬೆಳಗಾವಿ): ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿವಿಧ ಹಂತಗಳಲ್ಲಿ ಶಾಲೆಯಿಂದ ಹೊರಗುಳಿಯುವ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಅದರಲ್ಲಿಯೂ ಅಲ್ಪಸಂಖ್ಯಾತ ಮಕ್ಕಳ ಸಂಖ್ಯೆತುಂಬಾ ಹೆಚ್ಚಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ತಜ್ಞರ ಸಮಿತಿ ರಚಿಸಲಿದೆ.

  ಸೋಮವಾರ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ನಜೀರ್ ಅಹಮದ್ ಅವರ ಪ್ರಶ್ನೆಗೆ ಉತ್ತರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಈ  ಮಾಹಿತಿ ನೀಡಿದರು. ಶಾಲೆಯಿಂದ ಹೊರಗುಳಿಯುವ ಮಕ್ಕಳನ್ನು ಆಕರ್ಷಿಸಲು ಸರ್ಕಾರ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ. ಶಿಕ್ಷಣ ಹಕ್ಕು ಕಾಯ್ದೆಯಡಿ 6ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಯೋಜನೆ ಈ ವರ್ಷದಿಂದ ಜಾರಿಗೆ ಬರಲಿದೆ. ಅಗತ್ಯವಿರುವೆಡೆ ಶಿಕ್ಷಕರ ನೇಮಕಾತಿ ನಡೆಯುತ್ತಿದೆ ಎಂದರು.

ಶಾಲೆಯಿಂದ ಹೊರಗಿರುವ ಮಕ್ಕಳನ್ನು ಮರಳಿ ಶಾಲೆಗೆ ತರಲು ಸರ್ಕಾರ ಬಹಳ ಗಂಭೀರವಾಗಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಅಲ್ಪಸಂಖ್ಯಾತ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿದೆ. ತಜ್ಞರ ಸಮಿತಿಯ ಮೂಲಕ ಈ ಬಗ್ಗೆ ಪರಿಶೀಲನೆ ಮಾಡಲಿದ್ದೇವೆ ಎಂದರು.

2011-12ರಲ್ಲಿ 39,841 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು ಅಲ್ಪ ಸಂಖ್ಯಾತ ಮಕ್ಕಳ ಸಂಖ್ಯೆ ಶೇ 23.16ರಷ್ಟಿದೆ. ಈ ಪ್ರಮಾಣ 2008-09ರಲ್ಲಿ 14.92ರಷ್ಟಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT