ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತನಿಖಾ ವರದಿಗೆ 19ರ ವರೆಗೆ ಕಾಲಾವಕಾಶ

Last Updated 24 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಹಾವೇರಿ: ಶಾಸಕ ನೆಹರೂ ಓಲೇಕಾರ ವಿರುದ್ಧ ಭೂ ಹಗರಣ ಆರೋಪ ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾ ಲೋಕಾಯುಕ್ತ ಎಸ್‌ಪಿ ಅವರಿಗೆ ಮಾ. 19ರ ವರೆಗೆ ಜಿಲ್ಲಾ ಲೋಕಾಯುಕ್ತ ವಿಶೇಷ ನ್ಯಾಯಾಲಯ ಕಾಲಾವಕಾಶ ನೀಡಿದೆ.

ನ್ಯಾಯಾಲಯದ ಆದೇಶದ ಪ್ರಕಾರ ಪ್ರಕರಣದ ವಿಚಾರಣೆ ನಡೆಸಿ ಶುಕ್ರವಾರ (ಫೆ. 24) ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಿತ್ತು. ಆದರೆ ತನಿಖೆ ನೇತೃತ್ವ ವಹಿಸಿರುವ ಜಿಲ್ಲಾ ಲೋಕಾಯುಕ್ತ ಎಸ್‌ಪಿ ಕಮ್ಮಾರ ವರದಿ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕೆಂದು ಶುಕ್ರವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ಜಿಲ್ಲಾ ವಿಶೇಷ ಲೋಕಾಯುಕ್ತ ನ್ಯಾಯಾಲಯದ ನ್ಯಾಯಾಧೀಶ ರಾಮಕೃಷ್ಣಯ್ಯ  ಪುರಸ್ಕರಿಸಿದರು.

ನೆಹರೂ ಓಲೇಕಾರ ಅವರು ತಮ್ಮ ಅಧಿಕಾರ ಬಳಸಿಕೊಂಡು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಜಾಗೆಯನ್ನು ಅಕ್ರಮವಾಗಿ ಪಡೆದಿದ್ದಾರೆ ಎಂದು ಆರೋಪಿಸಿ ಜಿಲ್ಲಾ ವಿಶೇಷ ಲೋಕಾಯುಕ್ತ ನ್ಯಾಯಾಲಯದಲ್ಲಿ ಗುತ್ತಲದ ಕಾಂಗ್ರೆಸ್ ಮುಖಂಡ ಈರಪ್ಪ ಲಮಾಣಿ ಖಾಸಗಿ ದೂರು ಸಲ್ಲಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT