ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಪ್ಪಿದ ಅವಕಾಶ: ಹಾವೇರಿ ಜಿ.ಸಾ.ಪ. ಅಸಮಾಧಾನ

Last Updated 6 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಅವಕಾಶ ಕೈತಪ್ಪಿರುವುದಕ್ಕೆ ಹಾವೇರಿ ಜಿಲ್ಲಾ ಸಾಹಿತ್ಯ ಪರಿಷತ್ತು ಅಸಮಾಧಾನ  ವ್ಯಕ್ತಪಡಿಸಿದೆ.
 ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಹಾವೇರಿ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಮಾರುತಿ ಸಿದ್ಲಾಪುರ ಅವರು, ‘ಹಾವೇರಿಯಲ್ಲಿ ಒಮ್ಮೆಯೂ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿಲ್ಲ. ಮುಂದಿನ ವರ್ಷ ನಡೆಯುವ ಸಮ್ಮೇಳನದ ಆತಿಥ್ಯ ನಮಗೆ ಸಿಕ್ಕೇ ಸಿಗುತ್ತದೆ ಎಂಬ ನಂಬಿಕೆ ಇತ್ತು. ಆದರೆ ಈ ಬಾರಿಯೂ ನಮಗೆ ಸಮ್ಮೇಳನ ನಡೆಸುವ ಅವಕಾಶ ಸಿಗದಿರುವುದು ನಿರಾಶೆ ತಂದಿದೆ’ ಎಂದು ಹೇಳಿದರು.

‘ವಿ.ಕೃ. ಗೋಕಾಕ್, ಪಂಚಾಕ್ಷರಿ ಗವಾಯಿ ಅವರಂತಹ ಸಾಧಕರ ನೆಲ ಹಾವೇರಿ. ಇಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ಅವಕಾಶ ಮಾಡಿಕೊಡದಿರುವುದು ಸಾಹಿತ್ಯ ದಿಗ್ಗಜರ ವೈಫಲ್ಯ. ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ಅವಕಾಶ ನೀಡುವಂತೆ ಆಗ್ರಹಿಸಿ ಎಲ್ಲ ಸಾಹಿತ್ಯ ದಿಗ್ಗಜರಿಗೆ ಪತ್ರ ಬರೆಯುತ್ತೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT