ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿಗೆ ಕಾವೇರಿ ನೀರು: ಹಾರಂಗಿ ಜಲಾಶಯಕ್ಕೆ ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ

Last Updated 5 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಕುಶಾಲನಗರ: ಹಾರಂಗಿ ಜಲಾಶಯದಿಂದ ತಮಿಳುನಾಡಿಗೆ ರಾತ್ರೋರಾತ್ರಿ ನೀರು ಹರಿಸಲಾಗಿದೆ ಎಂದು ಆರೋಪಿಸಿ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಶುಕ್ರವಾರ ಹಾರಂಗಿ ಜಲಾಶಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಮಾಜಿ ಸಚಿವ ಬಿ.ಎ.ಜೀವಿಜಯ, ಪಕ್ಷದ ಜಿಲ್ಲಾಧ್ಯಕ್ಷ ವಿ.ಪಿ.ಶಶಿಧರ್ ನೇತೃತ್ವದಲ್ಲಿ ಹಾರಂಗಿಗೆ ನೂರಾರು ಸಂಖ್ಯೆಯಲ್ಲಿ ತೆರಳಿದ ಪಕ್ಷದ ಕಾರ್ಯಕರ್ತರು ಮೆರವಣಿಗೆ ನಡೆಸಿ ರಾಜ್ಯದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಯಬಿಟ್ಟಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು.

ಹಾರಂಗಿಯಿಂದ ಒಂದು ಹನಿ ನೀರು ಕೂಡ ಬಿಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಹೇಳಿಕೆ ನೀಡಿದ್ದರೂ ಈ ಅಣೆಕಟ್ಟೆಯಿಂದ ನೀರು ಹರಿಸಿರುವ ಬಗ್ಗೆ ಸಚಿವರು ಏಕೆ ಮೌನ ವಹಿಸಿದ್ದಾರೆ ಎಂದು ಮಾಜಿ ಸಚಿವ ಜೀವಿಜಯ ಪ್ರಶ್ನಿಸಿದರು.

ಪಕ್ಷದ ಜಿಲ್ಲಾಧ್ಯಕ್ಷ ವಿ.ಪಿ.ಶಶಿಧರ್, ಜೆಡಿಎಸ್ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎಂ.ಷರೀಫ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ.ವಿಜಯ, ಮಡಿಕೇರಿ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಎಸ್.ಬಿ.ಭರತ್ ಇದ್ದರು.

ಹಾರಂಗಿ ಅಣೆಕಟ್ಟು ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪಾಲನೇತ್ರಯ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ನಂತರ ಹಾರಂಗಿ ದಿಗಿಳಿದು ಪ್ರತಿಭಟಿಸಿದ ಪಕ್ಷದ ಕಾರ್ಯಕರ್ತರು ಜಲಸತ್ಯಾಗ್ರಹ ನಡೆಸಿ ಇನ್ನು ಮುಂದೆ  ಹಾರಂಗಿಯಿಂದ ನೀರು ಹರಿಸಬಾರದು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT