ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿಗೆ ನೀರು: ಮಂಡ್ಯ ಬಂದ್ ಸಂಪೂರ್ಣ ಯಶಸ್ವಿ

Last Updated 8 ಡಿಸೆಂಬರ್ 2012, 12:05 IST
ಅಕ್ಷರ ಗಾತ್ರ

ಮಂಡ್ಯ, (ಪಿಟಿಐ) ;  ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಾದೇಗೌಡರ ನೇತೃತ್ವದಲ್ಲಿ ಕರೆಯಲಾಗಿದ್ದ ಮಂಡ್ಯ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಂಪೂರ್ಣ  ಬಂದ್ ಯಶಸ್ವಿಯಾಗಿದೆ

ಸಾವಿರಾರು ರೈತರು ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರಸ್ತೆ ತಡೆ ನಡೆಸಿದರು  ಪ್ರತಿಭಟನೆಯ ಕಾವು ಎಲ್ಲೆಡೆ ವ್ಯಾಪಿಸಿತ್ತು. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು ಪಟ್ಟಣದ ಅಂಗಡಿ ಮುಂಗಟ್ಟುಗಳು ಮುಚ್ಚಿ ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿದ್ದವು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮಾದೇಗೌಡರು , ನಮ್ಮ ಹೋರಾಟ ನಿರಂತರವಾಗಿ ಸಾಗುತ್ತದೆ. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು, ಈ ಪ್ರತಿಭಟನೆಗೆ ಸರ್ಕಾರ ಬಗ್ಗದಿದ್ದರೆ ವಿಧಾನಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.

ಕೆ.ಆರ್.ಎಸ್ ನ ನೀರಿನ ಗರೀಷ್ಟ ಮಟ್ಟ 124.80 ಅಡಿ ಇದ್ದು ಇಂದಿನ ಮಟ್ಟ 95.50 ಅಡಿ ನೀರು ಇದೆ. ಒಳಹರಿವು 2164 ಕ್ಯೂಸೇಕ್ ಇದ್ದು,  14394  ಕ್ಯೂಸೇಕ್ ಹೊರಹರಿವು ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT