ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನಲ್ಲಿ 59 ಡೆಂಗೆ ಪ್ರಕರಣ

Last Updated 15 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಚೆನ್ನೈ: ರಾಜ್ಯದಾದ್ಯಂತ ಹರಡುತ್ತಿರುವ `ಡೆಂಗೆ~ ಜ್ವರದ ನಿರ್ಮೂಲನೆಗಾಗಿ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ಇಲ್ಲಿಯವರೆವಿಗೂ 59 ಡೆಂಗೆ ಪ್ರಕರಣಗಳು ಪತ್ತೆಯಾಗಿದ್ದು, ಅವರೆಲ್ಲರಿಗೂ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದೆ.

ಮುಖ್ಯಮಂತ್ರಿ ಜಯಲಲಿತಾ ಅವರ ಅಧ್ಯಕ್ಷತೆಯಲ್ಲಿ  ನಡೆದ `ರಾಜ್ಯದಲ್ಲಿ ಡೆಂಗೆ ಜ್ವರದ ಸ್ಥಿತಿ ಮತ್ತು ನಿಯಂತ್ರಣ ಕ್ರಮಗಳ~ ಪ್ರಗತಿ ಪರಿಶೀಲನಾ ಸಭೆಯ ನಂತರ ಅಧಿಕಾರಿಗಳು ಈ ಮಾಹಿತಿ ನೀಡಿದರು.  ಇಲ್ಲಿಯವರೆವಿಗೆ ಡೆಂಗೆ ಜ್ವರದಿಂದ ಬಳಲುತ್ತಿದ್ದ 400 ಜನರಿಗೆ ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ. ಆದರೆ `ವಿವಿಧ ಅಂಗಾಂಗಳ ನ್ಯೂನತೆಯಿಂದ ಸಾವನ್ನಪ್ಪಿದ ಪ್ರಕರಣಗಳನ್ನೂ ಡೆಂಗೆ ಜ್ವರದ ಸಾವಿನ ಪ್ರಕರಣವೆಂದು ಕೆಲವೊಂದು ಮಾಧ್ಯಮಗಳು ಬಿತ್ತರಿಸುತ್ತಿವೆ. ಇದೊಂದು ಆಧಾರ ರಹಿತ ಸುದ್ದಿ~ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT