ಶನಿವಾರ, 30 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು ಮನವಿ ತಿರಸ್ಕರಿಸಿದ `ಸುಪ್ರೀಂ'

ತುರ್ತಾಗಿ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಅರ್ಜಿ
Last Updated 3 ಡಿಸೆಂಬರ್ 2013, 9:24 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತ ನ್ಯಾಯಮಂಡಳಿ ತೀರ್ಪನ್ನು ಜಾರಿಗೊಳಿಸಲು  ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕೆಂಬ ತನ್ನ ಅರ್ಜಿಯ  ವಿಚಾರಣೆಯನ್ನು ತುರ್ತಾಗಿ  ನಡೆಸಬೇಕೆಂಬ ತಮಿಳುನಾಡು ಸರ್ಕಾರದ ಮನವಿಯನ್ನು ಮಂಗಳವಾರ ತಿರಸ್ಕರಿಸಿರುವ ಸುಪ್ರೀಂ ಕೋರ್ಟ್ ಅದಕ್ಕೆ `ಆತುರವಿಲ್ಲ' ಎಂದು ಹೇಳಿದೆ.

`ತಮಿಳುನಾಡು ಮಾಡಿಕೊಂಡಿರುವ ಮನವಿಯಲ್ಲಿ ಯಾವುದೇ ತುರ್ತಿದೆ ಎಂದು ನಮಗೆ ಅನಿಸುತ್ತಿಲ್ಲ. ಈ ಅರ್ಜಿ ವಿಚಾರಣೆಯನ್ನು ನ್ಯಾಯಮಂಡಳಿ ನೀಡಿರುವ ತೀರ್ಪು ಕುರಿತಂತೆ ಸಲ್ಲಿಸಲಾಗಿರುವ ಸಿವಿಲ್ ಅರ್ಜಿಗಳೊಂದಿಗೆ ನಡೆಸಲಾಗುವುದು' ಎಂದು ನ್ಯಾಯಮೂರ್ತಿ ಆರ್.ಎಂ.ಲೋಧಾ ಅವರ ನೇತೃತ್ವದ ನ್ಯಾಯಪೀಠವು ಹೇಳಿತು.

ಇದೇ ವೇಳೆ ನ್ಯಾಯಪೀಠವು ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತಂತೆ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT