ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತವರೂರಿನಲ್ಲಿ ಡಾ.ಮತ್ತೂರು ಕೃಷ್ಣಮೂರ್ತಿ ಅಂತ್ಯಕ್ರಿಯೆ

Last Updated 7 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಶಿವಮೊಗ್ಗ: ಉಸಿರಾಟದ ತೊಂದರೆಯಿಂದ ಬೆಂಗಳೂರಿನಲ್ಲಿ  ಗುರುವಾರ ನಿಧನರಾದ ಹಿರಿಯ ಸಂಸ್ಕೃತ ವಿದ್ವಾಂಸ, ಖ್ಯಾತ ಗಮಕಿ ಡಾ.ಮತ್ತೂರು ಕೃಷ್ಣಮೂರ್ತಿ ಅವರ ಅಂತ್ಯಕ್ರಿಯೆ ಮತ್ತೂರಿನ ಶಾರದಾ ಭವನ ಮೈದಾನದ ಬಳಿಯ ಜಮೀನೊಂದರಲ್ಲಿ ಶುಕ್ರವಾರ ಮಧ್ಯಾಹ್ನ  ಸಕಲ ಸರ್ಕಾರಿ ಗೌರವ, ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಿತು.

ಅವರ ಪಾರ್ಥಿವ ಶರೀರವನ್ನು ಬೆಳಿಗ್ಗೆ 6ಕ್ಕೆ ಮತ್ತೂರಿನ ಶಾರದಾ ಪ್ರೌಢಶಾಲೆ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು.  ಅಂತ್ಯಕ್ರಿಯೆ ಸಂದರ್ಭದಲ್ಲಿ ಪೊಲೀಸರು 7 ಕುಶಾಲತೋಪು ಹಾರಿಸಿ ಗೌರವ ಸಲ್ಲಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ, ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ, ಜನಶಿಕ್ಷಣ ಸಂಸ್ಥೆ ಅಧ್ಯಕ್ಷೆ ಬಿ.ವೈ. ಅರುಣಾದೇವಿ, ಶಾಸಕ ಕಿಮ್ಮನೆ ರತ್ನಾಕರ್, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಗಿರೀಶ್ ಪಟೇಲ್, ಬಿಜೆಪಿ ಮುಖಂಡ ಭಾನುಪ್ರಕಾಶ್ ಅಂತಿಮ ನಮನ ಸಲ್ಲಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT