ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾ.ಪಂ. ಹೆಚ್ಚಿನ ಅನುದಾನಕ್ಕೆ ಪ್ರಯತ್ನ

Last Updated 21 ಫೆಬ್ರುವರಿ 2011, 19:35 IST
ಅಕ್ಷರ ಗಾತ್ರ

ಹುಮನಾಬಾದ್:  ಗ್ರಾಮ ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ನೀಡುತ್ತಿರುವ ಅನುದಾನಕ್ಕೆ ಹೋಲಿಸಿದಲ್ಲಿ ತಾಲ್ಲೂಕು ಪಂಚಾಯಿತಿ ಅನುದಾನ ಅತ್ಯಲ್ಪವಾಗಿದೆ. ಈ ನಿಟ್ಟಿನಲ್ಲಿ ಪಂಚಾಯತ್‌ರಾಜ್ ಕಾಯ್ದೆಗೆ ತಿದ್ದುಪಡಿ ತರುವ ಕುರಿತು ವಿಧಾನಸಭೆಯಲ್ಲಿ ಚರ್ಚಿಸುವುದಾಗಿ ಶಾಸಕ ಬಂಡೆಪ್ಪ ಕಾಶೆಂಪೂರ ತಿಳಿಸಿದರು.

ಸೋಮವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರ ನೂತನ ಕಚೇರಿ ಪೂಜೆ ನೆರವೇರಿಸಿದ ಅವರು ಮಾತನಾಡಿದರು. ಪಕ್ಷ ರಾಜಕೀಯ ಚುನಾವಣೆ ಪೂರ್ವ ಹಾಗೂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಸೀಮಿತಗೊಳ್ಳಬೇಕು. ನಂತರ ಅಧ್ಯಕ್ಷರು ಪಕ್ಷಾತೀತವಾಗಿ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಗ್ರ ಅಭಿವೃದ್ಧಿಗೆ ಗಮನ ಹರಿಸಬೇಕು ಎಂದು ಸೂಚಿಸಿದರು.

ಹಿರಿಯ ರಾಜಕಾರಣಿ ದಯಾನಂದ ಬಿರಾದಾರ, ಸದ್ಯದ ರಾಜ ಕೀಯ ಪರಿಸ್ಥಿತಿಯಿಂದ ಬೇಸತ್ತು ವಿಮುಖರಾಗದೇ ತಮ್ಮಲ್ಲಿನ ಸಿದ್ದಾಂತಗಳನ್ನು ಈಗಿನ ರಾಜಕಾರಣಿಗಳಿಗೆ ಧಾರೆ ಎರೆಯಬೇಕು ಎಂದು ಮನವಿ ಮಾಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT