ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾರಾ ಕ್ರಿಕೆಟ್: ವಾಹನಗಳ ಜಾತ್ರೆ

Last Updated 4 ಜೂನ್ 2011, 20:15 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಸೆಲೆಬ್ರೆಟಿ ಕ್ರಿಕೆಟ್ ಲೀಗ್ ಪಂದ್ಯ ವೀಕ್ಷಿಸಲು ಸಾವಿರಾರು ಮಂದಿ ಬಂದ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು.

ಪಂದ್ಯ ಮಧ್ಯಾಹ್ನ ಎರಡು ಗಂಟೆಗೆ ನಿಗದಿಯಾಗಿತ್ತು. ಸುಮಾರು ಇಪ್ಪತ್ತು ಸಾವಿರ ಮಂದಿ ಪಂದ್ಯ ವೀಕ್ಷಣೆಗೆ ಆಗಮಿಸಿದ ಕಾರಣ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಿತು.

ಎಂ.ಜಿ.ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಕ್ವೀನ್ ರಸ್ತೆ, ಕಸ್ತೂರಬಾ ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ರಾಜಭವನ ರಸ್ತೆ ಮುಂತಾದೆಡೆ ಟ್ರಾಫಿಕ್ ಜಾಮ್ ಆದ ಕಾರಣ ವಾಹನಗಳು ಕಿಲೋ ಮೀಟರ್‌ಗಟ್ಟಲೆ ಸಾಲುಗಟ್ಟಿ ನಿಲ್ಲುವಂತಾಯಿತು. ಇದೇ ವೇಳೆ ಮಳೆ ಸುರಿದ ಪರಿಣಾಮ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಯಿತು.

ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಪೊಲೀಸರು ಹರಸಾಹಸಪಟ್ಟರೂ ಪ್ರಯೋಜನ ಆಗಲಿಲ್ಲ. ಪಂದ್ಯಕ್ಕೆ ಸಾವಿರಾರು ಮಂದಿ ಆಗಮಿಸಿದ್ದು ಮತ್ತು ನೆಚ್ಚಿನ ಸಿನಿಮಾ ತಾರೆಗಳನ್ನು ನೋಡಲು ಜನರು ಅಪಾರ ಸಂಖ್ಯೆಯಲ್ಲಿ ಬಂದಿದ್ದ ಕಾರಣ ಸಂಚಾರ ವ್ಯವಸ್ಥೆಯ ಮೇಲೆ ಸ್ವಲ್ಪ ಪರಿಣಾಮ ಬೀರಿತು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT