ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲ್ಲೂಕು ಅಭಿವೃದ್ಧಿಗೆ ಯೋಜನೆ: ಶಾಸಕ

Last Updated 9 ಜುಲೈ 2012, 7:30 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಾಲ್ಲೂಕಿನ ಸರ್ವತೋ ಮುಖ ಅಭಿವೃದ್ಧಿಯ ದೃಷ್ಟಿಯಿಂದ ಈ ಸಾಲಿನಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎಚ್.ಎಸ್. ಮಹದೇವಪ್ರಸಾದ್ ಶುಕ್ರವಾರ ಹೇಳಿದರು.

ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಪರಿಶಿಷ್ಟ ಜನಾಂಗದ ಬೀದಿಗೆ 6 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಿರುವ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ತಾಲ್ಲೂಕಿನಾದ್ಯಂತ ವಿವಿಧ ಗ್ರಾಮ ಗಳಲ್ಲಿ 65 ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಿಸಲಾಗಿದೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜನಾಂಗದವರು ವಾಸಿಸುವ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವ ಸಲುವಾಗಿ ಬೇರಂಬಾಡಿ, ಚಿರಕನಹಳ್ಳಿ, ಚೌಡಹಳ್ಳಿ ಗ್ರಾಮಗಳಲ್ಲಿ ತಲಾ 25 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಿಸಲು ಈಗಾಗಲೇ ಚಾಲನೆ ನೀಡಲಾಗಿದೆ ಎಂದರು.

ಯರಿಯೂರು ಗ್ರಾಮದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸ ಲಾಗುವುದು, ಶಿವಪುರ ಗ್ರಾಮದಲ್ಲಿ 5 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಕಟ್ಟಡ, ಚೌಡಹಳ್ಳಿ ಗ್ರಾಮದಲ್ಲಿ 4 ಲಕ್ಷ ರೂ. ವೆಚ್ಚದಲ್ಲಿ ಅಡುಗೆ ಮನೆ, ಅಂಕಹಳ್ಳಿ, ಯರಿಯೂರು, ಪಂಜನ ಹಳ್ಳಿ ಗ್ರಾಮಗಳಲ್ಲಿ ತಲಾ 10 ಲಕ್ಷ ರೂ. ವೆಚ್ಚದಲ್ಲಿ ಡಾ. ಅಂಬೇಡ್ಕರ್ ಸಮುದಾಯ ಭವನ ನಿರ್ಮಿಸಲು ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ವತಿಯಿಂದ ಎಲ್ಲಾ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವುದರ ಮೂಲಕ ರಾಜೀವ್ ಗಾಂಧಿ ಯೋಜನೆಯಡಿ ಪ್ರತಿ ಮನೆಗೆ 65 ಸಾವಿರ ರೂ. ವೆಚ್ಚ ಮಾಡಿ ನಿರ್ಮಿಸಿ ಕೊಡಲಾಗುವುದು ಎಂದರು.

ಹಂಗಳ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯೆ ಅಂಬಿಕಾ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸಿ. ಕೋಮಲ, ತೆರಕಣಾಂಬಿ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಮಹಾದೇವಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯರು ಗಳಾದ ಮಲ್ಲಮ್ಮ, ಪುಟ್ಟಹನುಮಯ್ಯ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಹೇಶ್, ಸದಸ್ಯರುಗಳಾದ ಚಂದ್ರಶೇಖರ್, ಪಿ.ಬಿ. ರಾಜಶೇಖರ್, ಎಚ್.ಎಸ್. ಪ್ರಭುಸ್ವಾಮಿ, ವೈ.ಎನ್. ರಾಜಶೇಖರ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶಿವನಂಜಪ್ಪ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿಜಯಸಾರಥಿ, ಭೂ ಸೇನಾ ನಿಗಮದ ಶಿವಣ್ಣ, ರವಿಶಂಕರ್, ಶಿವಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಮದ್ದಾನಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT