ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲ್ಲೂಕು ಕಚೇರಿಗೆ ಶಾಸಕ ದಿಢೀರ್ ಭೇಟಿ; ತರಾಟೆ

Last Updated 21 ಅಕ್ಟೋಬರ್ 2011, 10:20 IST
ಅಕ್ಷರ ಗಾತ್ರ

ನರಸಿಂಹರಾಜಪುರ: ಇಲ್ಲಿನ ಮಿನಿ ವಿಧಾನಸೌಧಕ್ಕೆ ಗುರುವಾರ ದಿಢೀರ್ ಭೇಟಿ ನೀಡಿದ ಶಾಸಕ ಡಿ.ಎನ್.ಜೀವ ರಾಜ್ ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದು ಕೊಂಡರು.

ಸಂಧ್ಯಾ ಸುರಕ್ಷಾ ಯೋಜನೆ, ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ವಿಳಂಬ ನೀತಿ ಅನುಸರಿಸು ತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ದಿಢೀರ್ ಭೇಟಿ ನೀಡಿದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದು ಕೊಂಡು ಸಾರ್ವಜನಿಕರ ಕೆಲಸಗಳನ್ನು ವಿಳಂಬ ವಾಗದಂತೆ ಶೀಘ್ರ ಕಡತವಿಲೇವಾರಿ ಮಾಡಲು ಸೂಚಿಸಿದರು. 

 ಅಧಿಕಾರಿಗಳ ಸಭೆ ಕರೆದು ಮುಂದಿನ 15 ದಿನಗಳೊಳಗೆ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡಬೇಕು. ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯ ದೊಂದಿಗೆ ವರ್ತಿಸುವಂತೆ ಸಲಹೆ ನೀಡಿದರು.  ವೃದ್ಧಾಪ್ಯ ವೇತನ, ಅಂಗವಿಕಲ ವೇತನ, ಸಂಧ್ಯಾಸುರಕ್ಷಾ ಯೋಜನೆಯ ಕಡತ ವಿಳಂಬವಾಗದೆ ವಿಲೇವಾರಿ ಮಾಡಬೇಕು, ಭದ್ರಾ ಮೇಲ್ದಂಡೆ ಯೋಜನೆಯ ಸಂತ್ರಸ್ತರಿಗೆ ಪರಿಹಾರವನ್ನು ಶೀಘ್ರ ವಿತರಿಸುವಂತೆ ಸೂಚಿಸಿದರು.
 
ಕಂದಾಯ ಅಧಿಕಾರಿಗಳ ಬಗ್ಗೆ ದೂರು ಬಂದಿದ್ದು ತಪ್ಪನ್ನು ತಿದ್ದಿ ಕೊಳ್ಳುವಂತೆ ಸಲಹೆ ನೀಡಿದರು. ಕೆಲಸದ ಅವಧಿಯಲ್ಲಿ ಅಧಿಕಾರಿಗಳು ಕಚೇರಿಯಲ್ಲಿರದಿರುವ  ವಿಚಾರ ಗಮನಕ್ಕೆ ಬಂದಿದ್ದು ಇನ್ನೊಮ್ಮೆ ದಿಢೀರ್ ಭೇಟಿ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಪ್ರೇಮ,ಜಿಲ್ಲಾ ಪಂಚಾಯಿತಿ ಸದಸ್ಯೆ ಸುಜಾತ, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ನಿಲೇಶ್,ಪಟ್ಟಣ ಪಂಚಾಯಿತಿ ಸದಸ ್ಯರಾದ ಆಶೀಶ್ ಕುಮಾರ್ , ರಾಜೇಂದ್ರ, ಜಯರಾಮ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಜೆ.ಆಂಥೋನಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎಚ್.ಎಂ.ಮನು ಇದ್ದರು.   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT