ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾವರೆಕೆರೆ ಗ್ರಾ.ಪಂ.ಗೆ ಪ್ರಶಸ್ತಿಯ ಗರಿ

Last Updated 6 ಜೂನ್ 2011, 6:10 IST
ಅಕ್ಷರ ಗಾತ್ರ

ಚನ್ನಗಿರಿ: ತಾಲ್ಲೂಕು ಉಬ್ರಾಣಿ ಹೋಬಳಿಯ ತಾವರೆಕೆರೆ ಗ್ರಾ.ಪಂ.ಗೆ ಈ ವರ್ಷದ ನಿರ್ಮಲ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಿದೆ. ಈಗಾಗಲೇ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಪಡೆದುಕೊಂಡು ಬಂದಿದ್ದಾರೆ.

ಇತ್ತೀಚೆಗೆ ಗ್ರಾ.ಪಂ. ಅಧ್ಯಕ್ಷೆ ಸಾಹೀರಾಬಾನು ಹಾಗೂ ಸದಸ್ಯರು ಪ್ರಶಸ್ತಿಯನ್ನು ಸಾರ್ವಜನಿಕರಿಗೆ ಪ್ರದರ್ಶಿಸಿ ಸಂಭ್ರಮಪಟ್ಟರು. ಈ ಗ್ರಾ.ಪಂ. ವ್ಯಾಪ್ತಿಗೆ ತಾವರೆಕೆರೆ, ಮಸಣಿಕೆರೆ, ಗೊಂದಿ ಹೊಸಹಳ್ಳಿ ಹಾಗೂ ಮುಗಳಿಹಳ್ಳಿ ಗ್ರಾಮಗಳು ಒಳಪಡುತ್ತವೆ. ಈ ನಾಲ್ಕು ಗ್ರಾಮ ಸೇರಿ 1,500 ಕುಟುಂಬಗಳು ಇವೆ. ಒಟ್ಟಾರೆ ಶೇ. 80ರಷ್ಟು ಪ್ರಮಾಣದಲ್ಲಿ ಶೌಚಾಲಯಗಳನ್ನು ಈ ಗ್ರಾಮಗಳಲ್ಲಿ ನಿರ್ಮಿಸಿದ್ದರ ಪರಿಣಾಮ ಪ್ರಶಸ್ತಿ ಲಭಿಸಿದೆ.

ಈ ಗ್ರಾಮಗಳಲ್ಲಿ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಹಾಗೂ ವರ್ಗದ ಜನರು ಹೆಚ್ಚಾಗಿ ವಾಸಮಾಡುತ್ತಿದ್ದಾರೆ. ಗ್ರಾ.ಪಂ. ಅಧ್ಯಕ್ಷೆ ಸಾಹೀರಾಬಾನು ಸೇರಿದಂತೆ ಉಳಿದ 11 ಸದಸ್ಯರು ಜನರಲ್ಲಿ ಅರಿವು ಮೂಡಿಸುವಲ್ಲಿ ತುಂಬಾ ಸಹಕಾರ ನೀಡಿದ್ದಾರೆ. ಶೌಚಾಲಯಗಳ ಬಗ್ಗೆ ಈ ಜನರಲ್ಲಿ ಅರಿವನ್ನು ಮೂಡಿಸಿ ಸಹಾಯಧನವನ್ನು ನೀಡಿ ನಿರ್ಮಾಣ ಮಾಡಿಸಲಾಗಿದೆ. ಮುಂದಿನ ದಿನಗಳಲ್ಲಿ ಶೇ. 100ರಷ್ಟು ಸಾಧನೆ ಮಾಡಬೇಕೆಂಬ ಗುರಿಯನ್ನು ಹೊಂದಿದ್ದೇವೆ ಎಂದು ಪಿಡಿಒ ರೇಖಾ ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT