ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿದ್ದುಪಡಿಗೆ ಆಗ್ರಹ

Last Updated 2 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಹೈದರಾಬಾದ್ ಕರ್ನಾಟಕಕ್ಕೆ ಮೂಲಸೌಕರ್ಯಕ್ಕಾಗಿ ಸಂವಿಧಾನದ 371 ನೇ ಕಲಂ ತ್ದ್ದಿದುಪಡಿಗೆ ಆಗ್ರಹಿಸಿ ಕಳೆದ 15 ವರ್ಷಗಳಿಂದ  ಸಮಿತಿ ಹೋರಾಟ ನಡೆಸುತ್ತಾ ಬಂದರೂ ಕೇಂದ್ರ ಸರ್ಕಾರ ಇದುವರೆಗೂ ಕ್ರಮ ಕೈಗೊಳ್ಳದೇ ದೊಡ್ಡ ಅನ್ಯಾಯ ಮಾಡಿದೆ~ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ್ ಹೇಳಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,`ಅಭಿವೃದ್ಧಿಯನ್ನು ಕಡೆಗಣಿಸುವ ಜೊತೆಯಲ್ಲಿ ವೃತ್ತಿಪರ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗ ನೀಡುವುದರಲ್ಲಿ  ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಿಗೆ ದೊಡ್ಡ ಅನ್ಯಾಯ ಮಾಡಲಾಗಿದೆ.
 
ಸಿಇಟಿಯಲ್ಲಿಯೂ ಈ ಭಾಗದ  ವಿದ್ಯಾರ್ಥಿಗಳನ್ನು ನಿರ್ಲಕ್ಷಿಸಲಾಗುತ್ತಿದೆ.  ಕೂಡಲೇ ರಾಜ್ಯದ ಜನಪ್ರತಿನಿಧಿಗಳು ಕೇಂದ್ರದ ಮೇಲೆ ಒತ್ತಡ ತರಬೇಕು~ ಎಂದು ಆಗ್ರಹಿಸಿದರು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT