ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿರಂಗ ಯಾತ್ರೆಗೆ ಅಡ್ಡಿ: ಬಿಜೆಪಿ ಪ್ರತಿಭಟನೆ

Last Updated 25 ಜನವರಿ 2011, 19:30 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಬಿಜೆಪಿ ಯುವಮೋರ್ಚ ಹಮ್ಮಿಕೊಂಡಿದ್ದ ಶ್ರೀನಗರದಲ್ಲಿನ ತಿರಂಗ ಯಾತ್ರೆಗೆ ಕೇಂದ್ರ ಸರ್ಕಾರ ಅಡ್ಡಿಪಡಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಮಾನವ ಸರಪಳಿ ನಿರ್ಮಿಸಿ ರಸ್ತೆತಡೆ ನಡೆಸಿ ಪ್ರತಿಭಟಿಸಿದರು.

ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಸರ್ಕಾರ ವಿರುದ್ಧ ಘೋಷಣೆ ಕೂಗಿ ರಸ್ತೆ ತಡೆ ನಡೆಸಿದ ಕೆಲವು ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
ಶ್ರೀನಗರದ ಲಾಲ್‌ಚೌಕ್‌ನಲ್ಲಿ ತ್ರಿವರ್ಣ ಧ್ವಜ ಹಾರಿಸಲು ವಿಶೇಷ ರೈಲಿನಲ್ಲಿ ತೆರಳುತ್ತಿದ್ದವರನ್ನು ಮಹಾರಾಷ್ಟ್ರ ಸರ್ಕಾರ ತಡೆದು ಹಿಂದಕ್ಕೆ ಕಳುಹಿಸಿದೆ. ಈಗ ಪಕ್ಷದ ರಾಷ್ಟ್ರೀಯ ಮುಖಂಡರನ್ನು ಬಂಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಪ್ರತಿಭಟನಾಕಾರರು ಖಂಡಿಸಿದರು.

ನಗರದ ಹನುಮಂತಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ್ದರಿಂದ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಬಿಜೆಪಿ ಜಿಲ್ಲಾ ಘಟಕ ಕಾರ್ಯದರ್ಶಿ ವರಸಿದ್ದಿ ವೇಣುಗೋಪಾಲ್, ನಗರಸಭಾ ಸದಸ್ಯರಾದ ಮಂಜುನಾಥ, ಮುತ್ತಯ್ಯ, ರಾಘವೇಲು, ನಟರಾಜ್ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.

ಚಿಕ್ಕಮಗಳೂರು ಅಭಿವೃದ್ಧಿ ಪ್ರಾಧಿಕಾರ(ಸಿಡಿಎ) ಅಧ್ಯಕ್ಷ ಶ್ರೀಕಾಂತ್‌ಪೈ, ಮಾಜಿ ಅಧ್ಯಕ್ಷ ರಂಗನಾಥ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮ್ ಕುಮಾರ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT