ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಂಗು, ಅಡಿಕೆ ಬೆಳೆಯಿಂದ ರೂ 1,389 ಕೋಟಿ ನಷ್ಟ

Last Updated 4 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು:  ಅತಿ ಹೆಚ್ಚು ಮಳೆ ಬಿದ್ದ ಕಾರಣ ಅಡಿಕೆ ಬೆಳೆ ಹಾಳಾದರೆ, ಮಳೆ ಇಲ್ಲದೆ ತೆಂಗು ಬೆಳೆ ಹಾಳಾಗಿದೆ. ಈ ಎರಡೂ ಬೆಳೆಗಳಿಂದ ರೂ 1,389 ಕೋಟಿ ನಷ್ಟ ಆಗಿದೆ ಎಂದು ಸರ್ಕಾರದ ಅಭಿವೃದ್ಧಿ ಆಯುಕ್ತ ವಿ.ಉಮೇಶ್ ಬುಧವಾರ ಇಲ್ಲಿ ತಿಳಿಸಿದರು.

ಮಲೆನಾಡು ಭಾಗದ ಆರು ಜಿಲ್ಲೆಗಳಲ್ಲಿ ಅಡಿಕೆ ಹೆಚ್ಚು ಬೆಳೆಯುತ್ತಿದ್ದು, ಸುಮಾರು ರೂ 789 ಕೋಟಿಯಷ್ಟು ನಷ್ಟ ಆಗಿದೆ. ಇದರಿಂದ 65 ಸಾವಿರ ರೈತರು ತೊಂದರೆಗೆ ಒಳಗಾಗಿದ್ದಾರೆ. ಹಾಗೆಯೇ 15 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆ ಹಾಳಾದ ಕಾರಣರೂ 600 ಕೋಟಿ ನಷ್ಟ ಆಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ತೆಂಗು ಬೆಳೆ ಹಾಳಾಗಿರುವ ಬಗ್ಗೆ ಗೋರಖ್‌ಸಿಂಗ್ ನೇತೃತ್ವದ ಕೇಂದ್ರ ತಂಡ ಇತ್ತೀಚೆಗೆ ರಾಜ್ಯದಲ್ಲಿ ಪ್ರವಾಸ ಮಾಡಿತು. ಎಲ್ಲ ಜಿಲ್ಲೆಗಳಿಗೂ ಅದು ಭೇಟಿ ನೀಡಿ ನಷ್ಟದ ಅಂದಾಜು ಮಾಡಿದೆ. ಕೇಂದ್ರಕ್ಕೆ ಅದು ವರದಿ ಕೊಟ್ಟಿದ್ದು ಪರಿಹಾರ ಇನ್ನೂ ಘೋಷಣೆ ಆಗಿಲ್ಲ ಎಂದು ಅವರು ಹೇಳಿದರು.

ರಾಜ್ಯದ 150 ಹೋಬಳಿಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಬಿತ್ತನೆ ಕಾರ್ಯಕ್ಕೆ ಕುಂಠಿತ ಆಗಿದೆ ಎಂದು ಅವರು ಹೇಳಿದರು. ಮುಂಗಾರಿನಲ್ಲಿ 74.29 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಗೆ ಅಂದಾಜು ಮಾಡಲಾಗಿತ್ತು. ಆದರೆ, ಇದುವರೆಗೂ 64.83 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT