ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೈಲ ಆಮದಿಗೆ ಪಾಕ್ ನಕಾರ

Last Updated 30 ಮೇ 2012, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ): ಭಾರತದಿಂದ ಹೈ ಸ್ಪೀಡ್ ಡೀಸೆಲ್ ಮತ್ತು ಜೆಟ್ ಇಂಧನ ಆಮದು ಮಾಡಿಕೊಳ್ಳಲು ಪಾಕಿಸ್ತಾನ ನಿರಾಕರಿಸಿದೆ.

ಭದ್ರತಾ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಒಂದು ವೇಳೆ ಭಾರತ ತೈಲ ಪೂರೈಕೆ ಸ್ಥಗಿತಗೊಳಿಸಿದರೆ ಹೇಗೆಂಬ ಭೀತಿಯ ಹಿನ್ನೆಲೆಯಲ್ಲಿ ಪಾಕ್ ಈ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಯಾವುದೋ ಕಾರಣದಿಂದ ಭಾರತವು ಹೈಸ್ಪೀಡ್ ಡೀಸೆಲ್ ಮತ್ತು ಪೆಟ್ರೋಲ್ ಪೂರೈಕೆ ಸ್ಥಗಿತಗೊಳಿಸಿದರೆ ದೇಶದ ಭದ್ರತೆಗೇ ಅಪಾಯ ಎದುರಾಗಬಹುದು ಎಂಬುದು ಅಧಿಕಾರಿಗಳ ಅಭಿಪ್ರಾಯವಾಗಿದೆ.

ಕುವೈತ್ ಪೆಟ್ರೋಲಿಯಂ ಸಂಸ್ಥೆಯೊಂದಿಗೆ ಪಾಕ್ ದೀರ್ಘಕಾಲೀನ ಒಪ್ಪಂದ ಮಾಡಿಕೊಂಡಿದ್ದು, ಹೀಗಾಗಿ ಭಾರತದಿಂದ ಡೀಸೆಲ್ ಆಮದು ಮಾಡಿಕೊಳ್ಳಲು ಆಗದು. ತೈಲಕ್ಕಾಗಿ ಭಾರತವನ್ನು ಅವಲಂಬಿಸುವುದಕ್ಕಿಂತ ಕೊಲ್ಲಿ ರಾಷ್ಟ್ರಗಳನ್ನು ಅವಲಂಬಿಸುವುದೇ ಸೂಕ್ತ ಎಂಬ ಮಾತುಗಳೂ ಕೇಳಿಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT