ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋಟಗಾರಿಕಾ ಇಲಾಖೆ ಸೌಲಭ್ಯಗಳು ಸದ್ಬಳಕೆಯಾಗಲಿ

Last Updated 7 ಮೇ 2012, 5:10 IST
ಅಕ್ಷರ ಗಾತ್ರ

ಕನಕಪುರ: ರೈತರು ತೋಟಗಾರಿಕೆ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡರೆ, ಆರ್ಥಿಕವಾಗಿ ಮುಂದುವರೆಯಲು ಸಾಧ್ಯ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ರಘು ಅಭಿಪ್ರಾಯಪಟ್ಟರು.

ಇಲ್ಲಿನ ಕೋಟೆ ವಿನಾಯಕ ದೇವಸ್ಥಾನದ ಆವರಣದಲ್ಲಿ ತೋಟಗಾರಿಕೆ ಬೆಳೆಗಾರರ ಸಂಘ ಮತ್ತು ಕೃಷಿ ಮಾರಾಟ ಮಂಡಳಿ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತೋಟಗಾರಿಕಾ ಬೆಳೆಗಳಲ್ಲಿ ಆಧುನಿಕ ಬೇಸಾಯ ಕ್ರಮಗಳ ಅಳವಡಿಕೆ, ತರಬೇತಿ ಮತ್ತು ಮಾರ್ಗದರ್ಶನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಲಾಖೆಯಿಂದ ದೊರೆಯುವ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದ ಅವರು, ಹನಿ ನೀರಾವರಿಗೆ ಶೇ 80 ರಷ್ಟು ಸಹಾಯಧನ, ಬಯೋಡೈಜೆಸ್ಟರ್ ನಿರ್ಮಾಣಕ್ಕೆ 30 ಸಾವಿರ ರೂಪಾಯಿ, ಎರೆಹುಳು ಗೊಬ್ಬರ ತಯಾರಿಕಾ ತೊಟ್ಟಿ ನಿರ್ಮಾಣಕ್ಕೆ 30 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. ಹೂವು, ಹಣ್ಣಿನ ಬೆಳೆಗಳು ಹಾಗೂ ಯಂತ್ರೋಪಕರಣಗಳಿಗೆ ನೀಡುತ್ತಿರುವ ಸಹಾಯಧನವನ್ನು ರೈತರು ಸದ್ಭಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು. 

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಇಂದ್ರೇಶ್ ಉಪನ್ಯಾಸ ನೀಡಿ, ತೆಂಗಿನ ಬೆಳೆ ಲಾಭದಾಯಕ ವಾಣಿಜ್ಯ ಬೆಳೆಯಾಗಿದೆ. ತೋಟಗಾರಿಕಾ ಸಂಶೋಧನಾ ಕೇಂದ್ರವು ಹೆಚ್ಚು ಇಳುವರಿ ನೀಡುವ ತೆಂಗಿನ ತಳಿಗಳನ್ನು ರಿಯಾಯಿತಿ ದರದಲ್ಲಿ ನೀಡುತ್ತಿದೆ ಎಂದರು.

ರಾಜ್ಯ ಕೃಷಿ ಮಾರಾಟ ಮಂಡಳಿ ಕಿರಿಯ ಸಹಾಯಕ ನಿರ್ದೇಶಕಿ ಎಚ್.ಪಿ. ಪ್ರಮೀಳಾ ಮಾತನಾಡಿ, ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರಿಂದ ಹೆಚ್ಚಿನ ಸುಂಕ ವಸೂಲಿ ಮಾಡಲಾಗುತ್ತಿದೆ. ರೈತರು ತಮ್ಮ ಬೆಳೆಗಳಿಗೆ ಅಧಿಕೃತ ರಸೀದಿ ಪಡೆದು ಸರ್ಕಾರ ನಿಗದಿ ಮಾಡಿರುವಷ್ಟು ಸುಂಕವನ್ನು ಮಾತ್ರ ಕಟ್ಟಬೇಕು. ತಮ್ಮ ಸಮಸ್ಯೆಗಳಿಗೆ ಹತ್ತಿರದ ಎಪಿಎಂಸಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಅವರು ಸಲಹೆ ನೀಡಿದರು.

ರೈತ ಸಂಘದ ಕೆ.ಬಿ.ನಾಗರಾಜು, ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿ, ಸರ್ಕಾರದ ಕಾನೂನುಗಳು ರೈತರ ರಕ್ಷಣೆಗೆ ಬರುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ರೈತರ ಜತೆ ಚರ್ಚಿಸಿ ಅವರ ಸಮಸ್ಯೆಗಳನ್ನು  ಬಗೆಹರಿಸಬೇಕು ಎಂದು ಮನವಿ ಮಾಡಿದರು.

ತೋಟಗಾರಿಕೆ ಬೆಳೆಗಾರ ಸಂಘದ ಅಧ್ಯಕ್ಷ ವಾಡೆದೊಡ್ಡಿ ಕಬ್ಬಾಳೇಗೌಡ, ಕಾರ್ಯದರ್ಶಿ ದೊಡ್ಡ ಆಲಹಳ್ಳಿ ಸಂತೋಷ ಕುಮಾರ್, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಆನಮಾನಹಳ್ಳಿ ಶಿವಕುಮಾರ್, ಬೆಳೆಗಾರರ ಸಂಘದ ಕೃಷ್ಣಪ್ಪ, ಮರಿನಂಜೇಗೌಡ ಹಾಗೂ ರೈತರು ಶಿಬಿರದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT