ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ಯಾಗ, ಭಾತೃತ್ವದ ಹಬ್ಬದ ಸಂಭ್ರಮ

Last Updated 31 ಆಗಸ್ಟ್ 2011, 19:30 IST
ಅಕ್ಷರ ಗಾತ್ರ

ಕೊಪ್ಪಳ: ರಂಜಾನ್ ಮಾಸದ ಕೊನೆಯ ದಿನವಾದ ಬುಧವಾರ ನಗರದಲ್ಲಿ ಮುಸ್ಲಿಂ ಬಾಂಧವರು ಪವಿತ್ರ ಈದ್- ಉಲ್- ಫಿತರ್ ಹಬ್ಬವನ್ನು ಸಂಭ್ರಮ-ಸಡಗರಗಳಿಂದ ಆಚರಿಸಿದರು.

ನಗರದ ಸಾರ್ವಜನಿಕ ಆಸ್ಪತ್ರೆ ಪಕ್ಕದಲ್ಲಿರುವ ಈದ್ಗಾ ಮೈದಾನ, ಹುಲಿಕೆರೆ ಬಳಿ ಇರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮಾಜದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಧಾರ್ಮಿಕ ಮುಖಂಡರು, ಪವಿತ್ರ ರಂಜಾನ್ ಮಾಸದಲ್ಲಿ ಆಚರಿಸಲಾಗುವ ಈ ಹಬ್ಬ ತ್ಯಾಗ ಹಾಗೂ ಭ್ರಾತೃತ್ವವನ್ನು ಪ್ರತಿಪಾದಿಸುತ್ತದೆ ಎಂದು ಹೇಳಿದರು.

ಸಾರ್ವಜನಿಕ ಆಸ್ಪತ್ರೆ ಪಕ್ಕದ ಈದ್ಗಾ ಮೈದಾನದಲ್ಲಿ ಜರುಗಿದ ಸಾಮೂಹಿಕ ಪ್ರಾರ್ಥನೆಯಲ್ಲಿ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ, ಮಾಜಿ ಸಚಿವ ವಿರೂಪಾಕ್ಷಪ್ಪ ಅಗಡಿ, ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೆ.ಬಸವರಾಜ ಹಿಟ್ನಾಳ್, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ಸದಸ್ಯ ಗವಿಸಿದ್ದಪ್ಪ ಮುಂಡರಗಿ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್ ಪಾಲ್ಗೊಂಡು ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT