ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ಯಾಜ್ಯ ವಿಲೇವಾರಿ: ಜಂಟಿ ಆಯುಕ್ತರಿಗೆ ಹೆಚ್ಚು ಹೊಣೆ

ಬಿಬಿಎಂಪಿ ಮೇಯರ್ ಹೇಳಿಕೆ
Last Updated 8 ಡಿಸೆಂಬರ್ 2012, 19:56 IST
ಅಕ್ಷರ ಗಾತ್ರ

ಬೆಂಗಳೂರು: `ನಗರದ ತ್ಯಾಜ್ಯ ವಿಲೇವಾರಿಯ ಬಗ್ಗೆ ಪಾಲಿಕೆಯ ಜಂಟಿ ಆಯುಕ್ತರು ಹೆಚ್ಚಿನ ಜವಾಬ್ದಾರಿ ವಹಿಸಬೇಕು' ಎಂದು ಮೇಯರ್ ಡಿ.ವೆಂಕಟೇಶಮೂರ್ತಿ ಹೇಳಿದರು.

ಶನಿವಾರ ನಗರದಲ್ಲಿ ತ್ಯಾಜ್ಯ ವಿಲೇವಾರಿ ಮತ್ತು ರಸ್ತೆಗಳ ಗುಂಡಿ ಮುಚ್ಚುವ ಕಾಮಗಾರಿಗಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

`ಬಿಬಿಎಂಪಿ ವಲಯಗಳ ಜಂಟಿ ಆಯುಕ್ತರು ಪ್ರತಿ ಶನಿವಾರ ಬೆಳಿಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪ್ರತಿವಾರ್ಡ್‌ನ ತ್ಯಾಜ್ಯ ವಿಲೇವಾರಿ ಬಗ್ಗೆ ಮುತುವರ್ಜಿ ವಹಿಸಿ ಕೆಲಸ ಮಾಡುವಂತೆ ನಿರ್ದೇಶನ ನೀಡಲಾಗಿದೆ' ಎಂದು ಅವರು ತಿಳಿಸಿದರು.

`ನಗರದಲ್ಲಿ ರಸ್ತೆಗಳ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನು ಕೆಲ ದಿನಗಳಲ್ಲಿ ನಗರದ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು' ಎಂದರು.

ಶನಿವಾರ ನಗರದಲ್ಲಿ ಒಟ್ಟು 5,500 ಟನ್ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಫ್ಲೆಕ್ಸ್‌ಗಳ ತೆರವು: `ನಗರದಲ್ಲಿ ಅನಧಿಕೃತ ಫ್ಲೆಕ್ಸ್‌ಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಫ್ಲೆಕ್ಸ್‌ಗಳನ್ನು ತೆರವುಗೊಳಿಸಬೇಕು' ಎಂದು ಮೇಯರ್ ಡಿ.ವೆಂಕಟೇಶಮೂರ್ತಿ ಪಾಲಿಕೆಯ ವಲಯಗಳ ಜಂಟಿ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.

ಶುಕ್ರವಾರದಿಂದ ಫ್ಲೆಕ್ಸ್‌ಗಳನ್ನು ತೆರವುಗೊಳಿಸುವ ಕಾರ್ಯ ಆರಂಭವಾಗಿದ್ದು, ಒಟ್ಟು 118 ಫ್ಲೆಕ್ಸ್‌ಗಳು ಮತ್ತು 179 ಬ್ಯಾನರ್‌ಗಳು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT