ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ಯಾಜ್ಯದ ಮರುಬಳಕೆಗೆ ತಜ್ಞರ ಸಮಿತಿ ನಿರ್ಣಯ

Last Updated 2 ಜುಲೈ 2013, 20:02 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಉತ್ಪಾದನೆಯಾಗುವ ಬೃಹತ್ ಪ್ರಮಾಣದ ತ್ಯಾಜ್ಯವನ್ನು ಕಾರ್ಖಾನೆಗಳಲ್ಲಿ ಮರುಬಳಕೆ ಮಾಡಲು ಉತ್ತೇಜನ ನೀಡುವ ಬಗ್ಗೆ ಮಂಗಳವಾರ ನಡೆದ ತ್ಯಾಜ್ಯ ನಿರ್ವಹಣೆಯ ತಜ್ಞರ ಸಮಿತಿಯ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.

ನಗರದಲ್ಲಿ ಪ್ರತಿನಿತ್ಯ ಸುಮಾರು 500 ಟನ್ ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆಯಾಗುತ್ತದೆ. ಜತೆಗೆ ಮರುಬಳಕೆ ಮಾಡಬಹುದಾದ ತ್ಯಾಜ್ಯವೂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಮರುಬಳಕೆ ಮಾಡಬಹುದಾದ ವಸ್ತುಗಳು ವ್ಯರ್ಥವಾಗಿ ತ್ಯಾಜ್ಯದ ರೂಪ ಪಡೆದು ಸಮಸ್ಯೆಯಾಗದಂತೆ ತಡೆಯಲು ಸಮಿತಿಯ ಈ ನಿರ್ಣಯ ಸಹಕಾರಿಯಾಗಲಿದೆ.

ಪ್ಲಾಸ್ಟಿಕ್‌ನ ಕೈ ಚೀಲ, ಬಾಟಲ್‌ಗಳು, ಲೋಹದ ತುಂಡುಗಳು, ರಬ್ಬರ್ ವಸ್ತುಗಳನ್ನು ಮರುಬಳಕೆ ಮಾಡಬಹುದಾಗಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನಗರದಲ್ಲಿ ಕಸದ ಸಮಸ್ಯೆಯನ್ನು ತಗ್ಗಿಸಲು ಎಲ್ಲ ರೀತಿಯಿಂದಲೂ ಪ್ರಯತ್ನಿಸಬೇಕು ಎಂದು ಸಮಿತಿ ಹೇಳಿದೆ.

ಸಮಿತಿಯ ಈ ನಿರ್ಣಯವನ್ನು ಅಂಗೀಕರಿಸುವ ಬಗ್ಗೆ ಒಲವು ತೋರಿರುವ ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ, ನಗರದ ವಿವಿಧ ಬಡಾವಣೆಗಳ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ವಿವಿಧ ಸಂಘ- ಸಂಸ್ಥೆಗಳ ಸಹಕಾರದೊಂದಿಗೆ ತ್ಯಾಜ್ಯದ ಸಮಸ್ಯೆಯನ್ನು ತಗ್ಗಿಸಲಾಗುವುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT