ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಥಾಣೆಯಲ್ಲಿ ಕುಸಿದ ಕಟ್ಟಡ, 45 ಸಾವು

Last Updated 5 ಏಪ್ರಿಲ್ 2013, 14:05 IST
ಅಕ್ಷರ ಗಾತ್ರ

ಥಾಣೆ (ಐಎಎನ್‌ಎಸ್): 7 ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ 45 ಮಂದಿ ಮೃತರಾಗಿ, 57 ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ಥಾಣೆಯ  ಶಿಲ್ ಪಾಠ ಪ್ರದೇಶದಲ್ಲಿ ಗುರುವಾರ ಸಂಜೆ ಜರುಗಿದೆ.

ಶುಕ್ರವಾರ ಬೆಳಿಗ್ಗೆ ಕುಸಿದು ಬಿದ್ದ ಅವಶೇಷಗಳಡಿಯಿಂದ ಐವರು ಮಕ್ಕಳನ್ನು ರಕ್ಷಿಸುವಲ್ಲಿ ರಕ್ಷಣಾ ಕಾರ್ಯಕರ್ತರು ಯಶಸ್ವಿಯಾದರು. ಸರಿಸುಮಾರು 12 ಗಂಟೆಗಳ ಕಾಲ ಇವರು ಅವಶೇಷಗಳಡಿ ಸಿಲುಕಿ ಹೊರಬರಲು ಹರಸಾಹಸ ಪಡುತ್ತಿದ್ದರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ ಬಹುತೇಕರ ಸ್ಥಿತಿ ಗಂಭೀರವಾಗಿದೆ ಎಂದು ಪರಿಹಾರ ಕಾರ್ಯಾಚರಣೆಯ ಉಸ್ತುವಾರಿ ಹೊತ್ತಿರುವ ಅಧಿಕಾರಿಗಳು ತಿಳಿಸಿದ್ದಾರೆ.

ಮೃತರಾದವರಲ್ಲಿ ಅನೇಕ ಮಕ್ಕಳು, ಮಹಿಳೆಯರೂ ಸೇರಿದ್ದಾರೆಂದು ಮೂಲಗಳು ತಿಳಿಸಿವೆ.

ನಿರ್ಮಾಣ ಹಂತದಲ್ಲಿದ್ದ ಈ ಬಹು ಅಂತಸ್ತಿನ ಕಟ್ಟಡವನ್ನು ಸಂಪೂರ್ಣ ಅಕ್ರಮವಾಗಿ ಕಟ್ಟಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡವನ್ನು ನಿರ್ಮಿಸುತ್ತಿದ್ದ ಇಬ್ಬರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಸದ್ಯ ಅವರೀಗ ಕುಟುಂಬ ಸಮೇತ ನಾಪತ್ತೆಯಾಗಿದ್ದಾರೆಂದು ಮೂಲಗಳು ತಿಳಿಸಿವೆ. ಇವರಿಗೆ ಸೇರಿದ ಮತ್ತೊಂದು ಕಟ್ಟಡವನ್ನು ಗುರುವಾರ ರಾತ್ರಿಯೇ ಮುಂಜಾಗರೂಕತಾ ಕ್ರಮವಾಗಿ ತೆರವುಗೊಳಿಸಲಾಗಿದೆ.

ಹಿರಿಯಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕಪಡೆ, ವಿಪತ್ತು ಪರಿಹಾರ ತಂಡಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಶುಕ್ರವಾರ ಮಧ್ಯಾಹ್ನವೂ ಪರಿಹಾರ ಕಾರ್ಯಾಚರಣೆ ಭರದಿಂದ ಸಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT