ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲೈಲಾಮಾಗೆ ಗಾಂಧಿ ಶಾಂತಿ ಪ್ರಶಸ್ತಿ

Last Updated 2 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಜೋಹಾನ್ಸ್‌ಬರ್ಗ್ (ಪಿಟಿಐ): ಟಿಬೆಟ್ ಧರ್ಮಗುರು ದಲೈಲಾಮಾ ಅವರನ್ನು ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಗಾಂಧೀಜಿ ಅವರ ಮೊಮ್ಮಗಳು  ಇಳಾ ಗಾಂಧಿ ಪ್ರಕಟಿಸಿದ್ದಾರೆ.

ಈ ಪ್ರಶಸ್ತಿಗೆ ಆಯ್ಕೆಯಾಗಿರುವ 76 ವರ್ಷದ ದಲೈಲಾಮಾ ಹೆಸರನ್ನು ಭಾನುವಾರ ಘೋಷಿಸಿದ್ದಾರೆ. ಪ್ರಶಸ್ತಿ ಸ್ವೀಕರಿಸಲು ಆಗಮಿಸಲಿರುವ ದಲೈಲಾಮಾ ಅವರಿಗೆ ದಕ್ಷಿಣ ಆಫ್ರಿಕಾ ಸರ್ಕಾರ ವೀಸಾ ನೀಡಬೇಕು ಎಂದೂ ಮನವಿ ಮಾಡಿದ್ದಾರೆ.

ಮುಂದಿನ ಭಾನುವಾರ ಡರ್ಬನ್ ಸಿಟಿ ಹಾಲ್‌ನಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.
ದಲೈಲಾಮಾ ಅವರು ಈ ವಾರ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲು ಉದ್ದೇಶಿಸಿದ್ದು, ಇದೇ ವೇಳೆ ಚೀನಾ ಒತ್ತಡದಿಂದ ದಕ್ಷಿಣ ಆಫ್ರಿಕಾ ಸರ್ಕಾರ ಅವರಿಗೆ ವೀಸಾ ನೀಡದೇ ಇರಬಹುದು ಎಂದು ಹೇಳಲಾಗುತ್ತಿದೆ.

ದಕ್ಷಿಣ ಆಫ್ರಿಕಾವು ಚೀನಾದ ಪ್ರಮುಖ ವಾಣಿಜ್ಯ ಪಾಲುದಾರ ದೇಶವಾಗಿದ್ದರಿಂದ ವೀಸಾ ನೀಡಲು ವಿಳಂಬ ಮಾಡುತ್ತಿದೆ ಎನ್ನಲಾಗುತ್ತಿದ್ದು, ದಲೈಲಾಮಾ ಅವರಿಗೆ ವೀಸಾ ನೀಡುವ ಪ್ರಕ್ರಿಯೆ ಪರಿಶೀಲನೆಯಲ್ಲಿದೆ ಎಂದು ದಕ್ಷಿಣ ಆಫ್ರಿಕಾದ ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT