ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಖಲೆ ಯತ್ನ: ಸೂರ್ಯ ನಮಸ್ಕಾರದ ಸುತ್ತ ವಿವಾದ

Last Updated 11 ಜನವರಿ 2012, 19:30 IST
ಅಕ್ಷರ ಗಾತ್ರ

ಭೋಪಾಲ್ (ಪಿಟಿಐ): ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಜನ ಪಾಲ್ಗೊಳ್ಳುವಂತೆ ಮಾಡಿ ವಿಶ್ವ ದಾಖಲೆ ಸ್ಥಾಪಿಸುವ ಮಧ್ಯಪ್ರದೇಶ ಸರ್ಕಾರದ ಉದ್ದೇಶವನ್ನು ವಿರೋಧ ಪಕ್ಷಗಳು ಶಿಕ್ಷಣ ಸಂಸ್ಥೆಗಳ ಕೇಸರೀಕರಣದ ಪ್ರಯತ್ನ ಎಂದು ಟೀಕಿಸಿದ್ದರೆ, ಮುಸ್ಲಿಂ ಧರ್ಮಗುರುಗಳು ಇಸ್ಲಾಂ ಧರ್ಮ ವಿರೋಧಿ ಕ್ರಮ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಅಂಗವಾಗಿ ಗುರುವಾರ ಸಾವಿರಾರು ವಿದ್ಯಾರ್ಥಿಗಳು ಸಾಮೂಹಿಕ  ಸೂರ್ಯ ನಮಸ್ಕಾರದಲ್ಲಿ ಪಾಲ್ಗೊಳ್ಳಲಿದ್ದು, ವಿಶ್ವ ದಾಖಲೆ ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರ ಬಯಸಿದೆ. ಆದರೆ ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು  ಮುಸ್ಲಿಂ ಧರ್ಮ ಗುರುಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವುದರಿಂದ ಸೂರ್ಯ ನಮಸ್ಕಾರ ಕಾರ್ಯಕ್ರಮ ವಿವಾದದ ಸುಳಿಯಲ್ಲಿ ಸಿಲುಕಿದೆ.

ಮುಸ್ಲಿಂ ಮುಖಂಡರು ಇದರ ವಿರುದ್ಧ  ಫತ್ವಾ ಹೊರಡಿಸಿದ್ದಾರೆ. ವಿಗ್ರಹ ಪೂಜೆಗೆ ಇದನ್ನು ಹೋಲಿಸಿರುವ ಅವರು ಇಸ್ಲಾಂಗೆ ಇದು ವಿರುದ್ಧವಾಗಿದೆ ಎಂದು  ಹೇಳಿದ್ದಾರೆ. ಸೂರ್ಯ ನಮಸ್ಕಾರದ ವಿರುದ್ಧ ಫತ್ವಾ ಸಹ ಹೊರಡಿಸಿದ್ದು, ನಗರದ ಖಾಜಿ ಸೈಯ್ಯದ್ ಮುಷ್ತಾಕ್ ಅಲಿ ನದ್ವಿ ಇದಕ್ಕೆ ಸಮ್ಮತಿ ಸೂಚಿಸಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ಹೆಚ್ಚು ಶ್ರಮವಹಿಸಿ ಈ ಕಾರ್ಯಕ್ರಮ ಸಂಘಟಿಸಿದ್ದು, ಸೂರ್ಯ ನಮಸ್ಕಾರದಲ್ಲಿ ಅಸಂಖ್ಯಾತ ವಿದ್ಯಾರ್ಥಿಗಳು ಭಾಗವಹಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದೆ. ಆ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT