ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಭೋಲ್-ಬೆಂಗಳೂರು ಅನಿಲ ಮಾರ್ಗ ಉದ್ಘಾಟನೆ

Last Updated 3 ಡಿಸೆಂಬರ್ 2013, 10:31 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಮಹಾರಾಷ್ಟ್ರದ ದಾಭೋಲ್‌ನಿಂದ ಬೆಂಗಳೂರಿಗೆ ಅನಿಲ ಪೂರೈಕೆ ಮಾಡುವ ರೂ.4,500 ಕೋಟಿ ವೆಚ್ಚದ ಕೊಳವೆ ಮಾರ್ಗ ಯೋಜನೆಯನ್ನು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಮಂಗಳವಾರ ಉದ್ಘಾಟಿಸಿದರು.

ಸರ್ಕಾರಿ ಸ್ವಾಮ್ಯದ ಭಾರತೀಯ ಅನಿಲ ಪ್ರಾಧಿಕಾರ (ಜಿಎಐಎಲ್) ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ.

ಜಿಎಐಎಲ್ ಮತ್ತು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟ (ಫಿಕ್ಕಿ) ಜಂಟಿಯಾಗಿ ಆಯೋಜಿಸಿದ್ದ 8ನೇ ಏಷ್ಯಾ ಅನಿಲ ಸಹಭಾಗಿತ್ವ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿಯವರು ಈ ಯೋಜನೆಯನ್ನು ದೇಶಕ್ಕೆ ಸರ್ಮಪಿಸಿದರು.

ದಿನವೊಂದಕ್ಕೆ 16 ದಶಲಕ್ಷ ಘನ ಅಡಿ ನೈಸರ್ಗಿಕ ಅನಿಲದಿಂದ 3,000 ಮೆಗಾವಾಟ್ ವಿದ್ಯುತ್ ಉತ್ಪಾದಿಸುವಂತೆ ಈ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ.

19 ತಿಂಗಳಲ್ಲಿ ಪೂರ್ಣಗೊಂಡ ಈ ಯೋಜನೆಯ ಮಾರ್ಗವು ದಾಭೋಲ್‌ನಿಂದ ಬೆಳಗಾವಿ, ಧಾರವಾಡ, ಗದಗ, ಬೆಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ ಮೂಲಕವಾಗಿ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಪ್ರದೇಶಗಳನ್ನು ಸಂಪರ್ಕಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT