ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಳಿಂಬೆ, ದ್ರಾಕ್ಷಿ ಬೆಳೆ ಸಾಲ ಬಡ್ಡಿ ಮನ್ನಾ

Last Updated 21 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ದಾವಣಗೆರೆ: ಉತ್ತರ ಕರ್ನಾಟಕದಲ್ಲಿ ದಾಳಿಂಬೆ, ದ್ರಾಕ್ಷಿಗೆ ರೋಗ ಕಾಣಿಸಿಕೊಂಡು ನಷ್ಟ ಅನುಭವಿಸಿರುವ ರೈತರು ಪಡೆದ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲು ಕೇಂದ್ರ ಸರ್ಕಾರ ಒಪ್ಪಿದೆ ಎಂದು ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಸಾಧು ಸದ್ಧರ್ಮ ವೀರಶೈವ ಸಂಘ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ರೈತರಿಗೆ ಪರಿಹಾರವಾಗಿ ಸಾಲ ಮನ್ನಾ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ಆದರೆ, ಸಾಲದ ಮೇಲಿನ ಬಡ್ಡಿ ₨ 500ರಿಂದ 600 ಕೋಟಿ ಮನ್ನಾ ಆಗಲಿದೆ ಎಂದು ಹೇಳಿದರು.

‘ಅಡಿಕೆ ಬೆಳೆ ನಿಷೇಧಿಸಲಾಗುತ್ತಿದೆ ಎನ್ನುವುದು ಸುಳ್ಳು. ಮುಖ್ಯಮಂತ್ರಿ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಲೋಕಸಭೆ ಚುನಾವಣೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ಹುಟ್ಟು ಹಾಕಿರುವ ಹುಸಿ ಇದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT