ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವೋಸ್‌ನಲ್ಲಿ ಇಂದಿನಿಂದ ವಿಶ್ವ ವಾಣಿಜ್ಯ ಶೃಂಗ ಸಭೆ

Last Updated 24 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದಾವೋಸ್‌ನಲ್ಲಿ ಜ. 25ರಿಂದ ವಿಶ್ವ ವಾಣಿಜ್ಯ ಶೃಂಗ ಸಭೆ (ಡಬ್ಲ್ಯುಇಎಫ್) ನಡೆಯಲಿದ್ದು, ಮುಖೇಶ್‌ಅಂಬಾನಿ, ಸುನಿಲ್ ಮಿತ್ತಲ್, ರಾಹುಲ್ ಬಜಾಜ್, ಅಜೀಂ ಪ್ರೇಮ್‌ಜಿ ಸೇರಿದಂತೆ ದೇಶದ 100ಕ್ಕೂ ಹೆಚ್ಚು ಉದ್ಯಮ ಮುಖಂಡರು ಭಾಗವಹಿಸಲಿದ್ದಾರೆ.

ಕೈಗಾರಿಕಾ ಸಚಿವ ಆನಂದ ಶರ್ಮಾ, ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಅವರೂ ಈ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಮುಖವಾಗಿ ಜಾಗತಿಕ ಆರ್ಥಿಕ ಅಸ್ಥಿರತೆ ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಈ ಐದು ದಿನಗಳ ಸಭೆಯಲ್ಲಿ ಚರ್ಚೆ ನಡೆಯಲಿದೆ. ಜರ್ಮನಿಯ ಛಾನ್ಸಲರ್ ಏಂಜೆಲಾ ಮರ್ಕೆಲ್ ಶೃಂಗಸಭೆ ಉದ್ಘಾಟಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT