ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಹೈಕೋರ್ಟ್ ಬಾಂಬ್ ಸ್ಫೋಟ ಕೆಲವರ ಬಂಧನ

Last Updated 14 ಸೆಪ್ಟೆಂಬರ್ 2011, 12:45 IST
ಅಕ್ಷರ ಗಾತ್ರ

ಜಮ್ಮು/ನವದೆಹಲಿ/ಕೋಲ್ಕೋತ್ತಾ (ಪಿಟಿಐ): ದೆಹಲಿ ಹೈಕೋರ್ಟ್ ಬಾಂಬ್ ಸ್ಫೋಟ ಪ್ರಕರಣದ ಹೊಣೆ ಹೊತ್ತು ಇ-ಮೇಲ್ ಕಳುಹಿಸಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರನ್ನು ಹಾಗೂ ಜಾರ್ಖಾಂಡ್‌ನಲ್ಲಿ ಒಬ್ಬನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕಿಶ್ತವಾರ್‌ನಲ್ಲಿ ಸ್ಫೋಟದ ಹೊಣೆ ಹೊತ್ತು ಮಾಧ್ಯಮ ಕಚೇರಿಗಳಿಗೆ ಇ-ಮೇಲ್ ಕಳುಹಿಸಿದ ಆರೋಪದ ಮೇಲೆ ಅಬೀದ್ ಮತ್ತು ಶಾರೀಖ್ ಎಂಬಾತರನ್ನು ಪೊಲೀಸರು ಬಂಧಿಸಿದ್ದಾರೆ.

ಇವರಿಬ್ಬರಿಗೂ ಯಾವುದೇ ಅಪರಾಧ ಹಾಗೂ ಭಯೋತ್ಪಾದನಾ ಚಟುವಟಿಕೆಯ ಹಿನ್ನಲೆ ಇಲ್ಲ ಎಂಬುದು ಸ್ಪಷ್ಟವಾಗಿದ್ದರೂ ಇವರು ಸ್ಫೋಟ ಸಂಭವಿಸಿದ ಒಂದು ಗಂಟೆಯೊಳಗೆ ಮಾಧ್ಯಮ ಕಚೇರಿಗಳಿಗೆ ಸ್ಫೋಟದ ಹೊಣೆ ಹೊತ್ತು ಇ-ಮೇಲ್ ಕಳುಹಿಸಿದ್ದರು. ಹೀಗಾಗಿ ಇವರನ್ನು ಬಂಧಿಸಿದ್ದು, ಸುಳ್ಳು ಪತ್ತೆಯಂತ್ರದ ಮೂಲಕ ಹಾಗೂ ಮಂಪರು ಪರೀಕ್ಷೆ ಮೂಲಕ ಇವರನ್ನು ಹೆಚ್ಚಿನ ವಿಚಾರಣೆಗೆ ರಾಷ್ಟ್ರೀಯ ಭದ್ರತಾ ಸಂಸ್ಥೆ ಒಳಪಡಿಸಲಿದೆ ಎಂದು ಮೂಲಗಳು ತಿಳಿಸಿವೆ.

ನಾಲ್ಕನೇ ಇ-ಮೇಲ್ ಕುರಿತಂತೆ ಜಾರ್ಖಾಂಡ್‌ನ 14 ವರ್ಷದ ವಿದ್ಯಾರ್ಥಿ ಸನ್ನಿ ಶುಕ್ಲ ಎಂಬಾತನನ್ನು ಬಂಧಿಸಿರುವ ಪೊಲೀಸರು ಈತ ಕುಚೋದ್ಯಕ್ಕಾಗಿ ಮೇಲ್ ಕಳುಹಿಸಿದ್ದು, ಈತನಿಗೂ ಸ್ಫೋಟಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ ಈತನ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT