ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಯಾನಿ ಬಂಧನ ಖಂಡಿಸಿ ಪ್ರತಿಭಟನೆ

Last Updated 22 ಡಿಸೆಂಬರ್ 2013, 19:27 IST
ಅಕ್ಷರ ಗಾತ್ರ

ಬೆಂಗಳೂರು: ಅಮೆರಿಕದಲ್ಲಿನ ಭಾರತದ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಖೋಬ್ರಾಗಡೆ ಅವರನ್ನು ಅಮಾನವೀಯವಾಗಿ ನಡೆಸಿ­ಕೊಂಡಿರುವ ಕ್ರಮವನ್ನು ಖಂಡಿಸಿ ‘ಚಿಲ್ಡ್ರನ್‌ ರೈಟ್ಸ್‌ ಇನಿಷಿಯೇಟಿವ್‌ ಫಾರ್‌ ಶೇರ್‌್ಡ  ಪೇರೆಂಟಿಂಗ್‌’ (ಕ್ರಿಸ್ಪ್‌) ಸಂಘಟನೆ ಸದಸ್ಯರು ನಗರದ ಪುರಭವನದ ಬಳಿ ಭಾನುವಾರ ಪ್ರತಿಭಟನೆ ಮಾಡಿದರು.

ಅಮೆರಿಕದ ಅಧಿಕಾರಿಗಳು ದೇವ­ಯಾನಿ ವಿರುದ್ಧ ಸುಳ್ಳು ದೂರು ದಾಖ­ಲಿಸಿ ಬಂಧಿಸಿದ್ದಾರೆ. ಅಲ್ಲದೇ, ವಿಚಾರಣೆ ನೆಪದಲ್ಲಿ ಅವರನ್ನು ವಿವಸ್ತ್ರ­ಗೊಳಿಸಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ದೂರಿದರು. ‘ರಾಜತಾಂತ್ರಿಕ ಅಧಿಕಾರಿಗಳನ್ನು ಗೌರವ­­ದಿಂದ ನಡೆಸಿಕೊಳ್ಳಬೇಕು. ಆದರೆ, ದೇವ­ಯಾನಿ ರ ವಿಷಯದಲ್ಲಿ ಅಮೆ­ರಿಕ ಅನಾಗರಿಕವಾಗಿ ವರ್ತಿಸಿದೆ. ಅವ­ರನ್ನು ಅವಮಾನಿಸುವ ಮೂಲಕ ದೇಶದ ಗೌರವಕ್ಕೆ ಧಕ್ಕೆ ಉಂಟು ಮಾಡಿದೆ’ ಎಂದು ಸಂಘಟನೆಯ ಅಧ್ಯಕ್ಷ ಕುಮಾರ್‌ ಜಹಗೀರ್‌ದಾರ್‌ ಹೇಳಿದರು.

ಘಟನೆ ಸಂಬಂಧ ಅಮೆರಿಕ ಅಧ್ಯಕ್ಷರು ಕೂಡಲೇ ಕ್ಷಮೆ ಯಾಚಿಸಬೇಕು. ದೇವಯಾನಿ  ವಿರುದ್ಧ ದಾಖಲಿಸಿರುವ ಪ್ರಕರಣ ಹಿಂಪಡೆಯಬೇಕು. ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಅಮೆರಿಕದಲ್ಲಿ ನೆಲೆಸಿರುವ ಭಾರತೀಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮಗಳ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ಫ್ರಾನ್ಸ್‌ ಕಾನ್ಸುಲ್‌ ಜನರಲ್‌ ಕಚೇರಿಯ ಮಾಜಿ ಅಧಿಕಾರಿ ಪಾಸ್ಕಲ್‌ ಮುಜುರಿಯರ್‌ ಅವರಿಗೆ ನ್ಯಾಯ ಒದಗಿಸಬೇಕು. ಅವರಿಗೆ ಮಕ್ಕಳನ್ನು ಭೇಟಿಯಾಗಲು ಅವಕಾಶ ಕಲ್ಪಿಸಿಕೊಡಬೇಕು. ಪಾಸ್ಕಲ್‌ ಪ್ರಕರಣದ ವಿಚಾರಣೆಯನ್ನು ಆದಷ್ಟು ಬೇಗನೆ  ಪೂರ್ಣಗೊಳಿಸಬೇಕು ಎಂದು ಪ್ರತಿಭಟನಾನಿರತರು ಮನವಿ ಮಾಡಿದರು.
ಪಾಸ್ಕಲ್‌, ಅವರ ತಾಯಿ ಜಾಕಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT