ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಸ್ಥಾನಕ್ಕೆ ನ್ಯಾಯ ಒದಗಿಸಿ: ಭಕ್ತರ ಆಗ್ರಹ

Last Updated 9 ಅಕ್ಟೋಬರ್ 2012, 10:00 IST
ಅಕ್ಷರ ಗಾತ್ರ

ಹುಬ್ಬಳ್ಳಿ:  `ರಸ್ತೆ ವಿಸ್ತರಣೆ ಸಂದರ್ಭದಲ್ಲಿ ಅಡ್ಡಲಾಗಿದ್ದ ನವನಗರದ ಹೆಸ್ಕಾಂ ಕಚೇರಿ ಸಮೀಪ ಇರುವ ಬಾಲಮಾರುತಿ ದೇವಸ್ಥಾನವನ್ನು ಸ್ಥಳಾಂತರಿಸಿದ ಬಳಿಕವೂ ಲೋಕೋಪಯೋಗಿ ಇಲಾಖೆಯಿಂದ ಸಮಸ್ಯೆ ಎದುರಾಗಿದೆ. ಈ ವಿಷಯದಲ್ಲಿ ಜಿಲ್ಲಾಧಿಕಾರಿ ಅಥವಾ ಸಂಬಂಧಪಟ್ಟ ಅಧಿಕಾರಿಗಳು ಮಧ್ಯೆ ಪ್ರವೇಶಿಸಿ ನ್ಯಾಯ ಒದಗಿಸಬೇಕು~ ಎಂದು ದೇವಸ್ಥಾನದ ಅಧ್ಯಕ್ಷ ರಘು ಪೂಜಾರಿ ಆಗ್ರಹಿಸಿದರು.

ನವನಗರದಲ್ಲಿ ದೇವಸ್ಥಾನ ಸಮೀಪ ಮುಖ್ಯರಸ್ತೆಯಲ್ಲಿ ಭಕ್ತರು ಸೋಮವಾರ ಉಪವಾಸ ಸತ್ಯಾಗ್ರಹ ಉದ್ದೇಶಿಸಿ ಮಾತನಾಡಿ, `ಕಳೆದ 35 ವರ್ಷಗಳಿಂದ ಸ್ಥಳೀಯರ ಆರಾಧ್ಯ ದೇವಸ್ಥಾನವಾಗಿರುವ ಬಾಲಮಾರುತಿ ಗುಡಿಯನ್ನು ಚತುಷ್ಪಥ ರಸ್ತೆ ವಿಸ್ತರಣೆಗೆ ಅಡ್ಡಿಯಾಗುತ್ತಿದೆ ಎಂಬ ಕಾರಣಕ್ಕೆ ಅಲ್ಲೇ ಹಿಂಭಾಗದಲ್ಲಿರುವ ಸರ್ಕಾರಿ ಖಾಲಿ ಜಾಗಕ್ಕೆ ಎರಡು ತಿಂಗಳ ಹಿಂದೆ ಸ್ಥಳಾಂತರಿಸಲಾಗಿತ್ತು.

ಆದರೆ ಆ ಜಾಗ ಸಹಿತ ಸುತ್ತಲಿನ 3 ಎಕರೆ 10 ಗುಂಟೆ ಸರ್ಕಾರಿ ಜಾಗವನ್ನು ಆಸ್ಪತ್ರೆ ನಿರ್ಮಾಣಕ್ಕೆಂದು ಪಾಲಿಕೆ ನೀಡಿದ್ದು, ದೇವಸ್ಥಾನವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಜಾಗ ತೋರಿಸಿದೆ. ಇದಕ್ಕೆ ಭಕ್ತರ ಸಮ್ಮತವಿಲ್ಲ~ ಎಂದರು.

`ಇದೀಗ ಲೋಕೋಪಯೋಗಿ ಇಲಾಖೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಮತ್ತೆ ಬೇರೆಡೆಗೆ ಸ್ಥಳಾಂತರಿಸುವಂತೆ ತೊಂದರೆ ಕೊಡುತ್ತಿದೆ. ಈ ಬಗ್ಗೆ ಹಲವು ಬಾರಿ ಪಾಲಿಕೆಗೆ ಮನವಿ ಸಲ್ಲಿಸಿದ್ದೇವೆ. ಆದರೂ ಸಮಸ್ಯೆ ಪರಿಹಾರ ಆಗಿಲ್ಲ. ಹೀಗಾಗಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಮತ್ತು ಭಕ್ತರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವುದು ಅನಿವಾರ್ಯವಾಗಿದೆ~ ಎಂದರು.

ಸುನೀಲ ಅಣ್ವೇಕರ್, ಸುರೇಶ ಗೌಡ, ತ್ರಿಭುವನ್ ಕುಲಕರ್ಣಿ, ಬಸವರಾಜ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT