ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶ ನಿರ್ಮಾಣದಲ್ಲಿ ಪಾಕ್ ಮಹಿಳೆಯರ ಪಾತ್ರ ದೊಡ್ಡದು

Last Updated 29 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಪರ್ತ್ (ಐಎಎನ್‌ಎಸ್): ರಾಜಕೀಯವಾಗಿ, ಆರ್ಥಿಕವಾಗಿ ಪಾಕಿಸ್ತಾನಿ ಮಹಿಳೆಯರು ಸದೃಢರಾಗಿದ್ದು, ದೇಶ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪಾಕಿಸ್ತಾನದ ಪ್ರಧಾನಿ ಯೂಸುಫ್ ರಾಜಾ ಗಿಲಾನಿ ಶನಿವಾರ ಅಭಿಪ್ರಾಯಿಸಿದ್ದಾರೆ.

ಕಾಮನ್‌ವೆಲ್ತ್ ಮುಖ್ಯಸ್ಥರ ಸಭೆಯಲ್ಲಿ (ಸಿಎಚ್‌ಒಜಿಎಮ್) `ಮಹಿಳೆ ಪರಿವರ್ತನೆಯ ರೂವಾರಿ~ ಎಂಬ ವಿಷಯ ಕುರಿತು ಮಾತನಾಡಿದ ಅವರು, ದೇಶದಲ್ಲಿ ಮಹಿಳೆಯರ ಪ್ರಗತಿಗಾಗಿ ಪಾಕಿಸ್ತಾನವು ತೆಗೆದುಕೊಂಡ ಕ್ರಮಗಳನ್ನು ವಿಶ್ವದ ನಾಯಕರಿಗೆ ಮನವರಿಕೆ ಮಾಡಿಕೊಟ್ಟರು. 

ಕಾಮನ್‌ವೆಲ್ತ್ ರಾಷ್ಟ್ರಗಳ ಒಟ್ಟು ಜನಸಂಖ್ಯೆಯಲ್ಲಿ ಶೇ 50ರಷ್ಟು ಮಹಿಳೆಯರು ಇದ್ದಾರೆ. ಇವರ ಸಕ್ರಿಯ ಸಹಭಾಗಿತ್ವ ಇಲ್ಲದೆಯೇ ಯಾವುದೇ ಸುಧಾರಣೆ ಕನಸಿನ ಮಾತಾಗುತ್ತದೆ ಎಂದು ವ್ಯಾಖ್ಯಾನಿಸಿದರು.

ಪಾಕಿಸ್ತಾನದಲ್ಲಿ, ಅರ್ಹತೆ ಆಧಾರದಲ್ಲಿ ಆಯ್ಕೆಯ ಜತೆಗೆ, ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಶೇ10ರಷ್ಟು ಉದ್ಯೋಗಗಳನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT