ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರ

Last Updated 1 ಜುಲೈ 2012, 8:40 IST
ಅಕ್ಷರ ಗಾತ್ರ

ಶಿವಮೊಗ್ಗ: ಉತ್ತಮ ದೇಶ ನಿರ್ಮಾಣ ಕಾರ್ಯದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅಭಿಪ್ರಾಯಪಟ್ಟರು.ಶನಿವಾರ ನಗರದ ಕಸ್ತೂರಬಾ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ದೇಶದಲ್ಲಿ ಹಣಕಾಸಿನ ಪರಿಸ್ಥಿತಿ ಹದಗೆಟ್ಟಿದೆ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಾಷ್ಟ್ರೀಯ ಬೆಳವಣಿಗೆ ಕುರಿತಾಗಿ ಜಾಗೃತ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮುಖ್ಯ. ಆದರೆ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ದುರಾಭ್ಯಾಸಗಳಿಗೆ ಬಲಿಯಾಗುತ್ತಿದಾರೆ. ಈ ಬಗ್ಗೆ ವಿದ್ಯಾರ್ಥಿಗಳು ಸದಾ ಜಾಗೃತರಾಗಿರಬೇಕು.

ಹಾಗೆಯೇ, ತಪ್ಪು ದಾರಿಯಲ್ಲಿರುವವರನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬಹುದು. ಹಾಗೆಯೇ, ಅಂಕವೊಂದೇ ಪ್ರಗತಿಗೆ ಆಧಾರವಲ್ಲ. ಒಬ್ಬೊಬ್ಬರು ಒಂದೊಂದು ವಿಚಾರದಲ್ಲಿ ನೈಪುಣ್ಯ ಹೊಂದಿರುತ್ತಾರೆ. ಸಾಹಿತ್ಯ, ಸಂಗೀತ, ಕ್ರೀಡೆ, ಚಿತ್ರಕಲೆ ಹೀಗೆ ನಾನಾ ಆಯ್ಕೆಗಳಿವೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ವಿಚಾರವನ್ನು ಶಿಕ್ಷಕರು ಹಾಗೂ ಪೋಷಕರ ಮುಂದೆ ವ್ಯಕ್ತಪಡಿಸಬೇಕು ಎಂದರು.

ಸಮಾರಂಭದಲ್ಲಿ ಎನ್‌ಇಎಸ್ ಕಾರ್ಯದರ್ಶಿ ಎಸ್.ವಿ. ತಿಮ್ಮಯ್ಯ, ಪ್ರಾಂಶುಪಾಲ ಎಂ.ಎಚ್. ಕೃಷ್ಣಮೂರ್ತಿ, ಮಾಜಿ ಶಾಸಕ ಡಾ.ಜಿ.ಡಿ. ನಾರಾಯಣಪ್ಪ, ಮಮತಾ, ಪ್ರಮೋದಿನಿ, ಎಸ್. ಸುರೇಶ್ ಉಪಸ್ಥಿತರಿದ್ದರು.
ಮೆಹಬೂಬಿ ಸ್ವಾಗತಿಸಿದರು. ಯಶವಂತ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT