ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಪ್ರಗತಿಗೆ ಬೇಕು ಸಾಕ್ಷರತೆ

Last Updated 9 ಸೆಪ್ಟೆಂಬರ್ 2011, 8:10 IST
ಅಕ್ಷರ ಗಾತ್ರ

ಮಾಲೂರು: ದೇಶದ ಪ್ರಗತಿಗೆ ಸಾಕ್ಷರತೆ ಅತಿ ಅಗತ್ಯವಾದದ್ದು. ಸಾಕ್ಷರತೆ ಪ್ರಮಾಣ ಹೆಚ್ಚಳಗೊಳ್ಳಲು ಸಮಾಜದ ಪ್ರತಿಯೊಬ್ಬ ನಾಗರಿಕ ಶ್ರಮಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಆರ್.ಆನಂದ್ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ತಾಲ್ಲೂಕು ಲೋಕ ಶಿಕ್ಷಣ ಸಮಿತಿಯಿಂದ ಹಮ್ಮಿಕೊಂಡಿದ್ದ ಅಂತರ ರಾಷ್ಟ್ರಿಯ ಸಾಕ್ಷರತಾ ದಿನಾಚರಣೆ  ಉದ್ಘಾಟಿಸಿ ಮಾತನಾಡಿದರು. 

ಸರ್ಕಾರ ಅನುಷ್ಠಾನಗೊಳಿಸುವ ಯೋಜನೆ ಬಗ್ಗೆ ಸಾರ್ವಜನಿಕರಲ್ಲಿ ತಿಳಿವಳಿಕೆ ಪಡಿಯಲು ಪ್ರತಿಯೊಬ್ಬರು ಶಿಕ್ಷಣ ಪಡೆಯುವುದು ಅತ್ಯಗತ್ಯ ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ  ಪ್ರೇರಕ ಮತ್ತು ಉಪ ಪ್ರೇರಕರು ಗ್ರಾಮೀಣ ಪ್ರದೇಶ ಗಳಿಗೆ ಭೇಟಿ ನೀಡಿ  ಅನಕ್ಷರಸ್ಥರನ್ನು ಗುರುತಿಸಿ   2012ರ ಒಳಗೆ ಉತ್ತಮ ಸಾಕ್ಷರತೆ ಪ್ರಮಾಣ ಹೆಚ್ಚಿಸಬಹುದು ಎಂದರು.

ಸಾಕ್ಷರತಾ ಧ್ವಜಾರೋಹಣವನ್ನು ತಹಶೀಲ್ದಾರ್ ಎಚ್.ಅಮರೇಶ್ ನೆರವೇರಿಸಿದರು.

ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಪಾರ್ವತಮ್ಮ ಸ್ವಾಮಿ, ಕಾರ್ಯ ನಿರ್ವಹಣಾಧಿಕಾರಿ ರಜನೀಕಾಂತ್ ಮಲ್ವಿ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರಾಮರೆಡ್ಡಿ, ಲೋಕ ಶಿಕ್ಷಣ ಸಮಿತಿ ತಾಲ್ಲೂಕು ಸಂಯೋಜಕರಾದ ಷಣ್ಮುಖಯ್ಯ, ರಾಧಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT