ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಸ್ವಾತಂತ್ರ್ಯ ರಕ್ಷಣೆ ಅತ್ಯಗತ್ಯ

Last Updated 21 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಅಹಿಂಸೆ ಮತ್ತು ಶಾಂತಿಯುತ ಚಳವಳಿಯಿಂದ ದೇಶವು ಗಳಿಸಿದ ಸ್ವಾತಂತ್ರ್ಯವನ್ನು ಇಂದಿನ ದಿನಗಳಲ್ಲಿ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಉಂಟಾಗಿದೆ. ಅನಿರೀಕ್ಷಿತ ಬೆಳವಣಿಗೆ ಮತ್ತು ಪರಿಣಾಮಗಳಿಂದ ಸ್ವಾತಂತ್ರ್ಯಕ್ಕೆ ಕುತ್ತು ಬಂದಿದ್ದು, ದೇಶವನ್ನು ರಕ್ಷಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಜಿ.ಜಟ್ಟಣ್ಣವರ ತಿಳಿಸಿದರು.

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, `ಸ್ವಾತಂತ್ರ್ಯದ ಮೌಲ್ಯವನ್ನು ನಾವೆಲ್ಲ ಅರ್ಥ ಮಾಡಿಕೊಳ್ಳಬೇಕಿದೆ. ಸ್ವಾತಂತ್ರ್ಯದ ರಕ್ಷಣೆಯಲ್ಲಿ ಎಲ್ಲರೂ ತೊಡಗಿಕೊಳ್ಳಬೇಕಿದೆ~ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಟಿ.ಡಿ.ಪವಾರ್ ಮಾತನಾಡಿ, ~ಪ್ರಸಕ್ತ ವರ್ಷ ದೇಶದಲ್ಲಿ 639 ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಅವರಲ್ಲಿ ಹತ್ತು ಮಂದಿ ನಮ್ಮ ರಾಜ್ಯದವರಾಗಿದ್ದಾರೆ~ ಎಂದರು.

ಜಿಲ್ಲಾಧಿಕಾರಿ ಡಾ.ಎನ್.ಮಂಜುಳಾ. ಚಿಂತಾಮಣಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಬಾನತ್, ಹಾರೋಬಂಡೆಯ ಶಿವಸಾಯಿ ಬಾಬಾ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT